October 5, 2026
Monday, October 5, 2026
spot_img

ಸಿಲಿಕಾನ್ ಸಿಟಿಯಲ್ಲಿ ಶುದ್ಧ ಗಾಳಿ ಇನ್ನು ಕನಸೇ? ಅಪಾಯದ ಮಟ್ಟ ತಲುಪಿದ ವಾಯು ಮಾಲಿನ್ಯ!

ರಾಜ್ಯದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯದ ಭೀತಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ರಾಜಧಾನಿ ಬೆಂಗಳೂರು ಸೇರಿದಂತೆ ಬೆಳಗಾವಿ ಮತ್ತು ಕಲಬುರ್ಗಿಯಲ್ಲಿ ಗಾಳಿಯ ಗುಣಮಟ್ಟ ತೀವ್ರವಾಗಿ ಕುಸಿಯುತ್ತಿದ್ದು, ಸಾರ್ವಜನಿಕರಲ್ಲಿ ಆರೋಗ್ಯದ ಆತಂಕ ಮನೆಮಾಡಿದೆ.

ಕೆಲವು ದಿನಗಳ ಹಿಂದಷ್ಟೇ ಕಳಪೆ ಮಟ್ಟಕ್ಕೆ ತಲುಪಿದ್ದ ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ ಇಂದು 172ಕ್ಕೆ ಏರಿಕೆಯಾಗಿದೆ.

ಇನ್ನು ಕುಂದಾನಗರಿ ಬೆಳಗಾವಿಯಲ್ಲಿ ಮಾಲಿನ್ಯದ ಪ್ರಮಾಣ 156 ದಾಟಿದ್ದು, ಅಪಾಯಕಾರಿ 200ರ ಗಡಿಯತ್ತ ವೇಗವಾಗಿ ಸಾಗುತ್ತಿದೆ. ಅಂಕಿ-ಅಂಶಗಳಲ್ಲಿ ಸಣ್ಣ ಬದಲಾವಣೆಗಳು ಕಂಡರೂ, ವಿಶ್ವ ಆರೋಗ್ಯ ಸಂಸ್ಥೆಯ ಮಾನದಂಡಗಳ ಪ್ರಕಾರ ಈ ಪರಿಸ್ಥಿತಿ ಮಾನವನ ಆರೋಗ್ಯಕ್ಕೆ ಅತ್ಯಂತ ಹಾನಿಕಾರಕವಾಗಿದೆ.

Must Read