ಸಿಎಂ ಬಟ್ಟೆ ಮಾತ್ರ ಶುದ್ಧವಾಗಿದ್ದರೆ ಸಾಕಾ? ಆಡಳಿತ ವೈಖರಿ ಪರಿಶುದ್ಧವಾಗಿರಬೇಕಲ್ಲವೇ?: ಸಿ.ಟಿ.ರವಿ ಪ್ರಶ್ನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ದಾಖಲಿಸಿರುವ ಅಕ್ರಮ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ತೀವ್ರ ವಾಗ್ದಾಳಿ ನಡೆಸಿದ್ದು, ಹಗರಣದ ಕುರಿತು ಸಿಬಿಐ ತನಿಖೆಗೆ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಎಂ ತವರು ಕ್ಷೇತ್ರದಲ್ಲಿ ನಡೆದಿರುವ ಮುಡಾ ಅಕ್ರಮದ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಮಾಹಿತಿ ಇಲ್ಲದೇ ಇರಲು ಸಾಧ್ಯವೇ? ಸಿಎಂ ಬಟ್ಟೆ ಕ್ಲೀನ್ ಆಗಿದ್ದರೆ ಸಾಕೆ? ಆಡಳಿತ ವೈಖರಿಯೂ ಪರಿಶುದ್ಧವಾಗಿರಬೇಕಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಆಸ್ತಿಯನ್ನು ಖರೀದಿಸಬೇಕಾದರೆ, 50:50 ಮಾಲೀಕತ್ವ ವರ್ಗಾವಣೆ ಅಗತ್ಯವಿದೆ. ಸರ್ಕಾರಕ್ಕೆ ಮೋಸ ಮಾಡಬೇಕೆಂದೇ ವ್ಯವಸ್ಥಿತವಾಗಿ ಮಾಡಿದ್ದಾರೆ ಮೋಸ ಮಡಿದವರು ಸಿಎಂ ಸಿದ್ದರಾಮಯ್ಯನವರಿಗೆ ಹತ್ತಿರವಾಗಿರುವವರು. ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಸಿಎಂ ತವರು ಕ್ಷೇತ್ರದಲ್ಲಿ ನಡೆದಿರುವ ಸಾವಿರಾರು ಕೋಟಿ ಅಕ್ರಮಗಳ ಬಗ್ಗೆ ಮಾತನಾಡುತ್ತಿದ್ದೇವೆ. ಸಿದ್ದರಾಮಯ್ಯ ಅವರು ತಮ್ಮ ಶುದ್ಧತೆ ಸಾಬೀತುಪಡಿಸಲು ರಾಜೀನಾಮೆ ನೀಡಬೇಕು ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!