ಹೊಸದಿಗಂತ ಡಿಜಿಟಲ್ ಡೆಸ್ಕ್:
ಪರಪ್ಪನ ಅಗ್ರಹಾರ ಜೈಲಿನಲ್ಲಿನಿಂದ ಬಿಡುಗಡೆಯಾಗಿ ಹೊರಬಂದ ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ,ಜೈಲಿನಲ್ಲಿರುವ ನಟ ದರ್ಶನ್ ಕುರಿತು ಹೇಳಿಕೆ ನೀಡಿದ್ದಾರೆ.
ಜೈಲಿನಲ್ಲಿ ನಾನು ನಟ ದರ್ಶನ್ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದೇನೆ. ಅವರು ಹಿಂದಿನಿಂದಲೂ ನನಗೆ ಪರಿಚಿತರಿದ್ದಾರೆ. ಹಾಗಾಗಿ, ಅವರೊಂದಿಗೆ ಮಾತುಕತೆ ನಡೆಸಿದ್ದೇನೆ ಎಂದು ಪಪ್ಪಿ ಹೇಳಿದ್ದಾರೆ.
ಜೈಲಿನಲ್ಲಿ ನಾನು ಮತ್ತು ನಟ ದರ್ಶನ್ ಭೇಟಿಯಾಗಿದ್ದೇವೆ. ನಾಲ್ಕು ತಿಂಗಳ ಅವಧಿಯಲ್ಲಿ ಒಂದು ಬಾರಿ ಮಾತ್ರ ಭೇಟಿಯಾಗಿದ್ದು ಎರಡು ನಿಮಿಷ ಮಾತನಾಡಿದ್ದೇವೆ. ಈ ಹಿಂದೆಯಿಂದಲೂ ದರ್ಶನ್ ಅವರೊಂದಿಗೆ ನನಗೆ ಪರಿಚಯ ಇತ್ತು. ಹೀಗಾಗಿ ಜೈಲಿನಲ್ಲಿ ಭೇಟಿಯಾಗಿ ಮಾತುಕತೆ ಮಾಡಿದ್ದೇವೆ. ಆದರೆ, ಅವರಿಗೆ ನೀಡಿರುವ ಸೌಲಭ್ಯದ ಬಗ್ಗೆ ಅಲ್ಲಿ ಚರ್ಚೆ ಮಾಡಲು ಆಗಲಿಲ್ಲ. ಅವರ ಬ್ಯಾರೆಕ್ ಬೇರೆ ನನ್ನ ಬ್ಯಾರೆಕ್ ಬೇರೆ ಎಂದು ಮಾಹಿತಿ ನೀಡಿದರು.
ಇನ್ನು ಜೈಲಿನಲ್ಲಿ ಇದ್ದಾಗ ಡಿ.ಕೆ. ಶಿವಕುಮಾರ್ ಅವರು ನನ್ನನ್ನು ಭೇಟಿಯಾಗಿದ್ದರು.ನಮ್ಮಗೆ ಆತ್ಮ ಸ್ಥೈರ್ಯ ತುಂಬುವ ಕೆಲಸ ಮಾಡಿದ್ದರು. ಈ ವೇಳೆ ಯಾವುದೇ ಸಹಿ ಹಾಕಿಸಿಕೊಂಡಿಲ್ಲ. ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ. ನಾನು ಮೊದಲ ಬಾರಿಗೆ ಶಾಸಕನಾಗಿದ್ದೇನೆ. ನಮ್ಮ ಜಿಲ್ಲೆಯಲ್ಲಿ ಸಾಕಷ್ಟು ಹಿರಿಯ ನಾಯಕರು ಇದ್ದಾರೆ, ಅವರಿಗೆ ಸಿಗಬೇಕು ಎಂದು ತಿಳಿಸಿದರು.

