ಮಾನವರ ಮೆದುಳಿಗೆ ಚಿಪ್ ಹಾಕಲು ಹೊರಟ ಎಲೋನ್ ಮಸ್ಕ್?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಎಲೋನ್ ಮಸ್ಕ್ ಅವರ ನ್ಯೂರಾಲಿಂಕ್ (Neuralink) ಎಂಬ ಕಂಪನಿಯು ಮಾನವರ ಮೆದುಳಿಗೆ ಅಳವಡಿಸಬಹುದಾದ ರೋಬೋಟ್ ಚಿಪ್ (Chip) ಅನ್ನು ಶೀಘ್ರವೇ ಪರೀಕ್ಷಿಸಲಿದೆ. ಈ ಕುರಿತು ಸ್ವತಃ ಅವರೇ ಹೇಳಿದ್ದು, ಜೊತೆಗೆ ಈ ತಂತ್ರಜ್ಞಾನದ ಪರೀಕ್ಷೆಯ ಬಳಿಕ ತಾನು ಚಿಪ್ ಅನ್ನು ಹೊಂದಲು ಬಯಸಿರುವುದಾಗಿ ಹೇಳಿದ್ದಾರೆ.

ಈ ಚಿಪ್ ಮನುಷ್ಯನಿಗೆ ಅಳವಡಿಸಲಾದಲ್ಲಿ ಆತ ತನ್ನ ಆಲೋಚನೆಗಳ ಮೂಲಕ ನೇರವಾಗಿ ಕಂಪ್ಯೂಟರ್‌ಗಳೊಂದಿಗೆ ಸಂವಹನ ನಡೆಸಲು ಸಾಧ್ಯವಾಗಲಿದೆ ಎಂದು ತಿಳಿಸಿದ್ದಾರೆ.

ಈ ಕುರಿತು ದಾಖಲೆಗಳನ್ನು ನಾವು ಎಫ್‌ಡಿಎಗೆ (ಅಮೆರಿಕದ ಫುಡ್ ಆಂಡ್ ಡ್ರಗ್ ಅಡ್ಮಿನಿಸ್ಟ್ರೇಷನ್) ಸಲ್ಲಿಸಿದ್ದೇವೆ. ಅಲ್ಲಿಂದ ಅನುಮತಿ ಪಡೆದರೆ, ಇನ್ನು ಕೆಲವೇ ತಿಂಗಳುಗಳಲ್ಲಿ ನಾವು ಮಾನವರಲ್ಲಿ ಮೊದಲ ಬಾರಿಗೆ ಚಿಪ್ ಅಳವಡಿಸಲು ಸಾಧ್ಯವಾಗಲಿದೆ ಎಂದು ಮಸ್ಕ್ ಹೇಳಿದ್ದಾರೆ.
2019ರ ಜುಲೈನಲ್ಲಿ ನ್ಯೂರಾಲಿಂಕ್ 2020ರಲ್ಲಿಯೇ ಮಾನವರ ಮೇಲೆ ಈ ಚಿಪ್‌ನ ಮೊದಲ ಪರೀಕ್ಷೆ ನಡೆಸುವುದಾಗಿ ತಿಳಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!