ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿದೇಶಿ ಮಹಿಳೆ ಸೇರಿದಂತೆ ಇನ್ನಿಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಹಾಗೂ ಹಲ್ಲೆ ಪ್ರಕರಣ ಹಂಪಿಯನ್ನು ಬೆಚ್ಚಿಬೀಳಿಸಿದೆ. ವಿದೇಶಿಗರು ಹಂಪಿಯ ವೈಭವ ಕಣ್ತುಂಬಿಕೊಳ್ಳಲು ಹೆಚ್ಚಿನ ಸಂಖ್ಯೆಯಲ್ಲಿ ನಿತ್ಯವೂ ಆಗಮಿಸುತ್ತಾರೆ. ಆದರೆ ಈ ರೀತಿ ಪ್ರಕರಣಗಳು ಜನರ ನೆಮ್ಮದಿ ಹಾಳು ಮಾಡಿದ್ದು, ಇದಕ್ಕೆ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ.
ವಿಜಯನಗರ ಜಿಲ್ಲೆಯ ಹಂಪಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ 117 ಕ್ಕೂ ಹೆಚ್ಚು ನೋಂದಣಿಯಾಗದ ಹೋಂಸ್ಟೇಗಳಿವೆ. ಇದು ಪ್ರವಾಸಿಗರ ಸುರಕ್ಷತೆಯ ಬಗ್ಗೆ, ವಿಶೇಷವಾಗಿ ವಿದೇಶಿಯರ ಸುರಕ್ಷತೆಯ ಬಗ್ಗೆ ಕಳವಳವನ್ನು ಹುಟ್ಟುಹಾಕಿದೆ. ಹೀಗಾಗಿ ಹೋಂಸ್ಟೇಗಳಿಗೆ ನೋಂದಣಿ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.
ಕರ್ನಾಟಕ ಪ್ರವಾಸೋದ್ಯಮ ಕಾಯ್ದೆಯ ಪ್ರಕಾರ, ಹೋಂಸ್ಟೇಗಳಿಗೆ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ನೋಂದಣಿ ಮತ್ತು ಅನುಮೋದನೆ ಕಡ್ಡಾಯವಾಗಿದೆ. ಆದಾಗ್ಯೂ, ಅನೇಕ ಹೋಂಸ್ಟೇ ಮಾಲೀಕರು ನೋಂದಾಯಿಸಿಕೊಂಡಿಲ್ಲ. ಕಾನೂನು ಸೌಲಭ್ಯ ಪಡೆಯಲು ಹೋಮ್ ಸ್ಟೇಗಳನ್ನು ನೋಂದಾಯಿಸಿಕೊಳ್ಳಲು ಜಿಲ್ಲಾಡಳಿತ ಅವಕಾಶ ಒದಗಿಸಿದೆ.