March 1, 2026
Sunday, March 1, 2026
spot_img

ಮಗನಿಗೆ ಕೂಡ ವಿಜಯ್ ಮೇಲೆ ಸಿಟ್ಟಿದ್ಯಾ? ಡಿವೋರ್ಸ್ ಬೆನ್ನಲೇ ತಂದೆಯನ್ನ ಅನ್​ಫಾಲೋ ಮಾಡಿದ್ನಾ ಜೇಸನ್?

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟ ದಳಪತಿ ವಿಜಯ್ ಹಾಗೂ ಸಂಗೀತಾ ಅವರ ವಿಚ್ಛೇದನ ಕುರಿತ ಚರ್ಚೆಗಳು ಮುಂದುವರಿಯುತ್ತಿರುವ ಬೆನ್ನಲ್ಲೇ, ಅವರ ಪುತ್ರ ಜೇಸನ್ ಸಂಜಯ್ ಸಾಮಾಜಿಕ ಜಾಲತಾಣದಲ್ಲಿ ತಂದೆಯನ್ನು ಅನ್​ಫಾಲೋ ಮಾಡಿದ್ದಾನೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ವಿಷಯವೇ ಈಗ ಹೆಚ್ಚು ಗಮನ ಸೆಳೆಯುತ್ತಿದೆ.

ಸಾಮಾಜಿಕ ಜಾಲತಾಣ ಬಳಕೆದಾರರು ಜೇಸನ್ ಸಂಜಯ್ ತನ್ನ ಖಾತೆಯಲ್ಲಿ ವಿಜಯ್ ಯನ್ನು ಅನ್​ಫಾಲೋ ಮಾಡಿದ್ದಾನೆ ಎಂದು ಹೇಳುತ್ತಿದ್ದಾರೆ. ಆದರೆ ಇದಕ್ಕೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ದೃಢೀಕರಣ ಇಲ್ಲ. ಕೆಲವರ ಪ್ರಕಾರ, ಜೇಸನ್ ಈ ಹಿಂದೆ ಸಹ ತಂದೆಯನ್ನು ಫಾಲೋ ಮಾಡ್ತಿರ್ಲಿಲ್ಲ ಎಂಬ ಮಾತುಗಳೂ ಕೇಳಿಬರುತ್ತಿವೆ. ಹೀಗಾಗಿ ‘ಅನ್‌ಫಾಲೋ’ ಮಾಡಿದರೆಂಬ ಮಾಹಿತಿ ಬಗ್ಗೆ ಸ್ಪಷ್ಟತೆ ಇಲ್ಲ.

ಇದನ್ನೂ ಓದಿ:

ಇದೀಗ ಕುಟುಂಬ ನ್ಯಾಯಾಲಯದಲ್ಲಿ ಸಂಗೀತಾ ವಿಚ್ಛೇದನ ಅರ್ಜಿ ಸಲ್ಲಿಸಿರುವುದಾಗಿ ವರದಿಗಳು ಬಂದಿರುವ ಹಿನ್ನೆಲೆ, ಈ ಸಾಮಾಜಿಕ ಜಾಲತಾಣ ವಿಚಾರಕ್ಕೂ ಹೆಚ್ಚಿನ ಪ್ರಾಮುಖ್ಯತೆ ಸಿಕ್ಕಿದೆ. ಆದರೆ ಕುಟುಂಬದ ಯಾವುದೇ ಸದಸ್ಯರಿಂದಲೂ ಈ ಬಗ್ಗೆ ಪ್ರತಿಕ್ರಿಯೆ ಲಭ್ಯವಾಗಿಲ್ಲ.

ಒಟ್ಟಿನಲ್ಲಿ, ಸಾಮಾಜಿಕ ಜಾಲತಾಣದ ಈ ಬೆಳವಣಿಗೆ ಊಹಾಪೋಹಗಳಿಗೆ ಕಾರಣವಾಗಿದ್ದು, ಅಧಿಕೃತ ಮಾಹಿತಿ ಹೊರಬರುವವರೆಗೆ ಸ್ಪಷ್ಟ ನಿರ್ಣಯಕ್ಕೆ ಬರಲು ಸಾಧ್ಯವಿಲ್ಲ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !