ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಸಿದ್ದರಾಮಯ್ಯ ಪತ್ನಿ ಮುಡಾ ಸೈಟ್ ವಾಪಾಸ್ ಮಾಡಿದ್ದಾರೆ. ಈ ಬಗ್ಗೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯಾಗುತ್ತಿದ್ದು, ಈ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಮಾತನಾಡಿದ್ದಾರೆ.
ಕಳ್ಳ ಒಡವೆ ಕದ್ಬಿಟ್ಟು ವಾಪಾಸ್ ಕೊಟ್ರೆ ಮುಗಿದುಹೋಯ್ತಾ? ಕಳ್ಳತನವನ್ನು ಮಾಫಿ ಮಾಡ್ಬೇಕಾ? ಕಾನೂನಿನ ಅಡಿಯಲ್ಲಿ ಏನೇನು ಪ್ರೊಸೀಜರ್ ಇದೆಯೋ ಅದರ ಪ್ರಕಾರವಾಗಿ ಎಲ್ಲ ನಡೆಯಬೇಕು ಎಂದಿದ್ದಾರೆ.
ಅಧಿಕಾರದಲ್ಲಿ ಇದ್ದಾಗ ಕುಟುಂಬ ಹತ್ತಿರವಿಟ್ಟುಕೊಂಡರೆ, ಮಕ್ಕಳನ್ನು ಬೆಳೆಸಲು ಮುಂದಾದರೆ ಅವರು ನಿಮ್ಮ ಹೆಸರಿಗೆ ಕಳಂಕ ತರುತ್ತಾರೆ ಎಂಬುದಕ್ಕೆ ಇದು ಇನ್ನೊಂದು ಉದಾಹರಣೆ. ಒಡವೆ ಕದ್ದ ಕಳ್ಳ ಒಡವೆ ವಾಪಸ್ ಕೊಟ್ಟರೆ ಕೇಸ್ ಮುಗಿಯುತ್ತಾ? ಇಲ್ಲ ಅಲ್ವಾ? ಎಂದು ಪ್ರಶ್ನಿಸಿದರು.
ಎರಡೂವರೆ ತಿಂಗಳ ಹಿಂದೆಯೇ ನಾನು ಸಿಎಂಗೆ ನಿಮಗೆ ಬಂದ ಅಕ್ರಮ ಸೈಟ್ ವಾಪಸ್ ಕೊಟ್ಟು ಬಿಡಿ ಎಂದು ಹೇಳಿದ್ದೆ. ಸಿಎಂ ಅವರ ಇಷ್ಟು ವರ್ಷದ ರಾಜಕೀಯ ಜೀವನವನ್ನು 14 ಸೈಟ್ ನುಂಗಬಾರದು ಎಂದು ಅಂದೇ ಹೇಳಿದ್ದೆ. ಎರಡೂವರೆ ತಿಂಗಳ ಹಿಂದೆ ವಾಪಸ್ ಕೊಟ್ಟಿದ್ದರೆ ಇವತ್ತು ಪ್ರಾಸಿಕ್ಯೂಷನ್, ಕೇಸ್ ಏನೂ ಆಗುತ್ತಿರಲಿಲ್ಲ. ಕುರ್ಚಿಯೂ ಅಲುಗಾಡುತ್ತಿರಲಿಲ್ಲ. ಈಗ ನೋಡಿ ಸಮಸ್ಯೆ ಕುತ್ತಿಗೆಗೆ ಬಂದಿದೆ ಎಂದು ಹೇಳಿದ್ದಾರೆ.