ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರಿನಲ್ಲಿ ಮತ ಚಲಾವಣೆ ಮಾಡಿದ ರಚಿತಾ ರಾಮ್, ಎಲ್ಲರೂ ಬಂದು ವೋಟ್ ಮಾಡಿ ಎಂದು ಮನವಿ ಮಾಡಿದ್ದಾರೆ.
ಮನೆಯಲ್ಲಿ ಕೂತು ಕಮೆಂಟ್ ಮಾಡೋದಕ್ಕಿಂದ ಬಂದು ವೋಟ್ ಮಾಡಿ. ವೋಟ್ ಮಾಡದೇ ಬ್ಲೇಮ್ ಮಾಡಬೇಡಿ, ನಮ್ಮ ನಾಯಕರ ಆಯ್ಕೆ ಮಾಡಲೇಬೇಕು. ಬಿಸಿಲು ಅಂತ ಮನೆಯಲ್ಲಿ ಕೂರಬೇಡಿ, ಸಂಜೆವರೆಗೂ ಟೈಂ ಇದೆ ಬಂದು ವೋಟ್ ಮಾಡಿ. ಹಿರಿಯನಾಗರೀಕರೆ ಉತ್ಸಾಹದಿಂದ ವೋಟ್ ಮಾಡುವಾಗ ಯುವಕರು ಯಾಕೆ ಮನೆಯಲ್ಲಿ ಕೂರಬೇಕು? ನಾಯಕನನ್ನು ಆಯ್ಕೆ ಮಾಡೋ ಪ್ರೊಸೆಸ್ ಅಲ್ಲಿ ಭಾಗಿಯಾಗದೇ ನಾಯಕ ಸರಿ ಇಲ್ಲ ಎನ್ನಬೇಡಿ ಎಂದು ಹೇಳಿದ್ದಾರೆ.