GOOD MORNING KARNATAKA | ಚಳಿಯಾ? ಸೆಕೆಯಾ? ಮೋಡವಾ? ಹೇಗಿದೆ ಇಂದು ಹವಾಮಾನ?

ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಹವಾಮನ ಮುನ್ಸೂಚನೆ ಪ್ರಕಾರ, ಮುಂದಿನ ೪೮ ಗಂಟೆಗಳಲ್ಲಿ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ಹಾಗೂ ಸುತ್ತಮುತ್ತಲಿನ ಪರಿಸರಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಮೋಡ ಕವಿದ ವಾತಾವರಣ ಇರಲಿದೆ. ಉಳಿದಂತೆ ಬೆಳಗಿನ ಜಾವ ಕೆಲವೆಡೆ ದಟ್ಟ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇದೆ ಉಷ್ಣಾಂಶ ಗರಿಷ್ಠ 28, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!