ಕೇವಲ ಅಚ್ಛೆ ದಿನ್ ಆಯೆಗಾ ಎಂದು ಡೈಲಾಗ್ ಹೊಡೆದರೆ ಸಾಕಾ?: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪ್ರಧಾನಿ ಮೋದಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ಮೋದಿ ಅವರು ನುಡಿದಂತೆ ನಡೆದಿದ್ದಾರಾ? ದೇಶದ ಜನರಿಗಾಗಿ ಏನೂ ಕಾರ್ಯಕ್ರಮ ರೂಪಿಸದೆ ಕೇವಲ ಅಚ್ಛೆ ದಿನ್ ಆಯೆಗಾ ಎಂದು ಡೈಲಾಗ್ ಹೊಡೆದರೆ ಸಾಕಾ? ಡೈಲಾಗ್ ನಿಂದ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ , ರಸಗೊಬ್ಬರ ಬೆಲೆ ಕಡಿಮೆ ಆಗತ್ತಾ? ಬರೀ ಬಾಯಲ್ಲಿ ಡೈಲಾಗ್ ಹೊಡೆದರೆ ಜನರ ಬದುಕಿನ ಸಂಕಷ್ಟ ಕಡಿಮೆ ಆಗ್ತದಾ? 56 ಇಂಚಿನ ಖಾಲಿ ಎದೆ ಇದ್ದರೆ ಸಾಲದು, ಅದರೊಳಗೆ ಮಾತೃ ಹೃದಯ ಇರಬೇಕು. ಇಲ್ಲದಿದ್ದರೆ ಹೀಗೇ ಆಗೋದು. ಉದ್ಯೋಗ ಸೃಷ್ಟಿ ಆಗೋದಿಲ್ಲ. ರೈತರ ಆದಾಯವೂ ದುಪ್ಪಟ್ಟಾಗುವುದಿಲ್ಲ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ವರುಣಾ ನನ್ನ ಪಾಲಿಗೆ ಅದೃಷ್ಟದ ಕ್ಷೇತ್ರ. ವರುಣಾದ ಜನರಿಂದ ನಾನು ಎರಡು ಬಾರಿ ಮುಖ್ಯಮಂತ್ರಿಯಾದೆ. ಈಗಲೂ ನನಗೆ ಮತ ನೀಡುತ್ತಿರುವುದು ಎಂದು ಭಾವಿಸಿ ನಮ್ಮ ಅಭ್ಯರ್ಥಿಗೆ ಮತ ನೀಡಿ. ನನಗಿಂತ ಹೆಚ್ಚು ಲೀಡ್ ಕೊಟ್ಟು ಸುನಿಲ್ ಬೋಸ್ ಅವರನ್ನು ಗೆಲ್ಲಿಸಿ, ಬಿಜೆಪಿಯ ಸುಳ್ಳುಗಳನ್ನು ಸೋಲಿಸಿ ಎಂದು ಮನವಿ ಮಾಡುತ್ತೇನೆ. ಮೈಸೂರು-ಚಾಮರಾಜನಗರ ಲೋಕಸಭೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ. ನಾನು ಇನ್ನಷ್ಟು ಗಟ್ಟಿಯಾಗಿ, ನನ್ನ ರಾಜಕೀಯ ಶಕ್ತಿಯೂ ಹೆಚ್ಚುತ್ತದೆ. ಇದಕ್ಕೆ ನೀವೆಲ್ಲರೂ ಬೆಂಬಲಿಸಬೇಕು ಎಂದು ಹೇಳಿದ್ದಾರೆ. ಜೆಡಿಎಸ್ನವರು ಮೈತ್ರಿ ಎಂದರೇನು ಎಂದು ಕಳೆದ ಬಾರಿಯೇ ತೋರಿಸಿದ್ದಾರೆ. ಮೈತ್ರಿಯಲ್ಲಿ ನಾಯಕರು ಜೊತೆಯಾಗುವುದು ಮುಖ್ಯವಲ್ಲ, ಜನರು ಒಂದಾಗಬೇಕು. ಜನರು ಯಾವ ಪಕ್ಷಕ್ಕೂ ಸೇರಿದವರಲ್ಲ, ಮೈತ್ರಿ ಮಾಡಿಕೊಂಡಿದ್ದಾರೆ ಎಂದು ನಾಯಕರ ಮಾತು ಕೇಳುವವರಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!