ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಪಕ್ಷಗಳ ನಾಯಕರಿಗೆ ಸಿದ್ದರಾಮಯ್ಯ ರಾಜೀನಾಮೆ ಕೇಳೋ ನೈತಿಕತೆ ಇದೆಯಾ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಾಗ್ದಾಳಿ ನಡೆಸಿದ್ದಾರೆ.
ಹೈಕೋರ್ಟ್‌ನಿಂದ ಸಿಎಂ ವಿರುದ್ಧ ತೀರ್ಪು ಬಂದ ಹಿನ್ನೆಲೆಯಲ್ಲಿ ಸಿಎಂ ಭೇಟಿ ಮಾಡಿದ ಬಳಿಕ ಮಾತನಾಡಿದ ಅವರು, ಇದು ರಾಜಕೀಯ ಪಿತೂರಿ. ಹೈಕೋರ್ಟ್‌ನಿಂದ ತೀರ್ಪು ಬಂದಿದೆ. ನಮಗೆ ಮುಂದೆ ಅನೇಕ ಆಯ್ಕೆಗಳು ಇವೆ. ನಾವು ಕಾನೂನು ಹೋರಾಟ ಮಾಡುತ್ತೇವೆ. ನಾವೆಲ್ಲ ಸಿಎಂ ಜೊತೆ ಇದ್ದೇವೆ ಎಂದು ತಿಳಿಸಿದರು.
ಸಿಎಂ ರಾಜೀನಾಮೆಗೆ ವಿಪಕ್ಷಗಳ ಒತ್ತಡ ವಿಚಾರಕ್ಕೆ ಪ್ರತಿಕ್ರಿಯಿಸಿ, ವಿಪಕ್ಷಗಳಿಗೆ ಹೇಳಿ ಸಮ್ಮಿಶ್ರ ಸರ್ಕಾರದಲ್ಲಿ ಎಷ್ಟು ಜನರ ಮೇಲೆ ಕೇಸ್ ಇದೆ. ಎಫ್‌ಐಆರ್ ದಾಖಲು ಆಗಿದೆ. ಎಷ್ಟು ಜನ ಬೇಲ್ ಮೇಲೆ ಇದ್ದಾರೆ. ಮೊದಲು ಅವರ ಬಳಿ ರಾಜೀನಾಮೆ ಪಡೆಯಲಿ. ಆಮೇಲೆ ಸಿಎಂ ಅವರ ರಾಜೀನಾಮೆ ಕೇಳಲಿ ಎಂದು ಆಕ್ರೋಶ ಹೊರ ಹಾಕಿದರು.