Tuesday, February 27, 2024

ಪ್ರತಾಪ್ ಬಿಟ್ಟು ಸಂಗೀತಾಗೆ ಫಿನಾಲೆ ಟಿಕೆಟ್ ಕೊಟ್ಟಿದ್ದು ಸರಿಯೇ?: ‘ಕಿಚ್ಚನ ಪಂಚಾಯ್ತಿ’ಯಲ್ಲಿ ಆಗುತ್ತೆ ನಿರ್ಧಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಗ್‌ಬಾಸ್‌ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಆರೋಪ ಒಂದು ಬಂದಿದ್ದು, ಈ ಕುರಿತು ಈ ವಾರದ ‘ಕಿಚ್ಚನ ಪಂಚಾಯ್ತಿ’ಯಲ್ಲಿ ಚರ್ಚೆ ನಡೆಯಲಿದೆ.

ಬಿಗ್‌ಬಾಸ್‌ ಶೋ ಆರಂಭದಿಂದಲೂ ನಿಷ್ಪಕ್ಷಪಾತ ಮತ್ತು ಪಾರದರ್ಶಕತೆಯನ್ನು ಕಾಪಾಡಿಕೊಂಡೇ ಬಂದಿದೆ. ಆದರೆ ಸೀಸನ್‌ ಹತ್ತರ ಕಳೆದ ವಾರದ ಕೆಲವು ಸಂಗತಿಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಒಂದು ಚರ್ಚೆ ನಡೆಯುತ್ತಿದೆ. ಅದನ್ನು ಗಮನಿಸಿದ ಕಿಚ್ಚ ವಾರಾಂತ್ಯದ ಎಪಿಸೋಡ್‌ನಲ್ಲಿ ಈ ಬಗ್ಗೆಯೇ ಚರ್ಚೆ ನಡೆಸುತ್ತಿದ್ದಾರೆ.

ವಿಷಯ ಏನೆಂದರೆ ಕಳೆದ ವಾರದ ಆರಂಭದಲ್ಲಿ, ಎಲ್ಲರಿಗೂ ವೈಯಕ್ತಿಕ ಟಾಸ್ಕ್‌ ನೀಡುತ್ತಾರೆ. ಅದರಲ್ಲಿ ಅತ್ಯುತ್ತಮವಾಗಿ ಆಡಿ ಅತಿ ಹೆಚ್ಚು ಪಾಯಿಂಟ್ಸ್ ಪಡೆದುಕೊಂಡವರಲ್ಲಿ ಒಬ್ಬರು ಫಿನಾಲೆಗೆ ನೇರವಾಗಿ ಆಯ್ಕೆಯಾಗುತ್ತಾರೆ ಎಂದು ಬಿಗ್‌ಬಾಸ್ ಹೇಳಿದ್ದರು.

ಅದೇ ಪ್ರಕಾರ ಟಾಸ್ಕ್‌ಗಳನ್ನು ನೀಡಲಾಗಿತ್ತು. ವಾರಾಂತ್ಯದ ಹೊತ್ತಿಗೆ ಪ್ರತಾಪ್‌ 420 ಅಂಕಗಳನ್ನು ಪಡೆದು ಮೊದಲ ಸ್ಥಾನದಲ್ಲಿದ್ದರು. 300 ಅಂಕಗಳನ್ನು ಪಡೆದ ಸಂಗೀತಾ ಎರಡನೇ ಸ್ಥಾನದಲ್ಲಿದ್ದರು ಮತ್ತು 210 ಅಂಕಗಳನ್ನು ಪಡೆದ ನಮ್ರತಾ ಮೂರನೇ ಸ್ಥಾನದಲ್ಲಿದ್ದರು.

ಆದ್ರೆ ಕೊನೆಯಲ್ಲಿ ಬಿಗ್‌ಬಾಸ್‌ ಅತಿ ಹೆಚ್ಚು ಅಂಕಗಳನ್ನು ಪಡೆದ ಮೂವರು ಸದಸ್ಯರ ಪೈಕಿ ಯಾರು ಫಿನಾಲೆಗೆ ಹೋಗಲು ಅರ್ಹರು ಎಂಬ ನಿರ್ಧಾರವನ್ನು ಬಹುಮತದ ಆಧಾರದ ಮೇಲೆ ಕೈಗೊಳ್ಳಲು ಮನೆಯ ಉಳಿದೆಲ್ಲ ಸದಸ್ಯರಿಗೆ ಸೂಚಿಸಿದ್ದರು. ಅದರಲ್ಲಿ ತುಕಾಲಿ ಸಂತೋಷ್, ಕಾರ್ತಿಕ್ ಮತ್ತು ತನಿಷಾ ಮೂವರೂ ಸಂಗೀತಾ ಅವರಿಗೆ ಓಟ್ ಮಾಡಿದ್ದರಿಂದ ಅತಿ ಹೆಚ್ಚು ವೋಟ್ ಪಡೆದ ಸಂಗೀತಾ ಫಿನಾಲೆಗೆ ನೇರ ಟಿಕೆಟ್ ಪಡೆದುಕೊಂಡಿದ್ದರು.

ವಾರವಿಡೀ ಅತ್ಯುತ್ತಮವಾಗಿ ಆಡಿ ಅತಿ ಹೆಚ್ಚು ಅಂಕ ಪಡೆದಿರುವ ಪ್ರತಾಪ್ ಬಿಟ್ಟು ಸಂಗೀತಾ ಅವರಿಗೆ ಫಿನಾಲೆ ಟಿಕೆಟ್ ಕೊಟ್ಟಿದ್ದು ಸರಿಯೇ ಎಂಬ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿದೆ. ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಿರುವ ಸುದೀಪ್, ವಾರಾಂತ್ಯದ ಎಪಿಸೋಡ್‌ನಲ್ಲಿ ಈ ಕುರಿತಾದ ಗೊಂದಲಗಳಿಗೆ ತೆರೆ ಎಳೆಯಲು ನಿರ್ಧರಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!