WEATHER | ರಾಜ್ಯದಲ್ಲಿಂದು ಬಿಸಿಲೋ ಮಳೆಯೋ? ಹೇಗಿರಲಿದೆ ವಾತಾವರಣ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಏಪ್ರಿಲ್‌ ಆರಂಭದಲ್ಲಿಯೂ ಬಿಸಿಲು ಹೆಚ್ಚಾಗಿದೆ, ಜೊತೆಗೆ ಬಿಸಿಗಾಳಿ ಬೀಸಿ ಜನರಿಗೆ ಇನ್ನಷ್ಟು ತಾಪತ್ರಯ ಉಂಟು ಮಾಡಿದೆ.

ಮುಂದಿನ 3 ತಿಂಗಳು ಬಿಸಿಲು ಹೀಗೇ ಇರಲಿದ್ದು, ಉತ್ತರ ಒಳನಾಡಿಗೆ ಉಷ್ಣಗಾಳಿಯ ಕೆಟ್ಟ ಪರಿಣಾಮ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಯಾದಗಿರಿಯಲ್ಲಿ ಗರಿಷ್ಠ ತಾಪಮಾನ 42 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು,ಮಂಡ್ಯ, ಮೈಸೂರು, ರಾಮನಗರದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!