spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, January 28, 2022

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

“ಮಾಜಿ ಪ್ರಧಾನಿಗಳೊಬ್ಬರು ಹಾಲಿ ಪ್ರಧಾನಿಯನ್ನು ಭೇಟಿ ಮಾಡುವುದು ತಪ್ಪೇ?”

- Advertisement -Nitte

ಹೊಸ ದಿಗಿಂತ ಡಿಜಿಟಲ್‌ ಡೆಸ್ಕ್:

ಮಾಜಿ ಪ್ರಧಾನಿಗಳೊಬ್ಬರು ಹಾಲಿ ಪ್ರಧಾನಿಯನ್ನು ಭೇಟಿ ಮಾಡುವುದು ತಪ್ಪೇ ಎಂದು ಮಾಜಿ ಸಿಎಂ ಹೆಚ್. ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು,  “ಸಂಸತ್ ಕಲಾಪಕ್ಕೆ ತೆರಳಿದ್ದ ಹೆಚ್.ಡಿ.ದೇವೇಗೌಡರು ಅಲ್ಲಿಯೇ ಇದ್ದ ಪ್ರಧಾನಮಂತ್ರಿಗಳ ಕಚೇರಿಯಲ್ಲಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಆ ಭೇಟಿ ರಾಜಕೀಯ, ಸಂಕುಚಿತತೆಯ ಎಲ್ಲೆ ಮೀರಿದ್ದು ಎನ್ನುವುದನ್ನು ಆ ಇಬ್ಬರು ನಾಯಕರ ಭೇಟಿಯ ಚಿತ್ರಗಳೇ” ಹೇಳುತ್ತವೆ ಎಂದಿದ್ದಾರೆ.

“ಅಸೂಯೆ, ದ್ವೇಷ, ಅಸಹನೆ, ಸರ್ವಾಧಿಕಾರಿ ಮನೋಭಾವದ ʼಸಿದ್ದಕಲೆʼಯ ನಿಪುಣನಿಗೆ ರಾಜಕೀಯದಲ್ಲಿ ವಿರಳಾತಿ ವಿರಳವಾಗಿ ಕಾಣುವ ಇಂಥ ಭೇಟಿಗಳನ್ನು ಅರಗಿಸಿಕೊಳ್ಳುವುದು ಹೇಗೆ ತಾನೇ ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.

ʼರಾಜಕೀಯ ರಕ್ಕಸತನʼಕ್ಕೆ ಅವರು ರಾಜಾಧಿರಾಜ. ʼರಾಜಕೀಯ ಆಶ್ರಯʼ ನೀಡಿದ ಕಾಂಗ್ರೆಸ್ ಪಕ್ಷವನ್ನೇ ಹೆಬ್ಬಾವಿನಂತೆ ನುಂಗಲು ಹೊರಟ ʼಸಿದ್ದಸೂತ್ರಧಾರʼನಿಗೆ ರಾಜಕೀಯ ಬದುಕು ಕೊಟ್ಟು ಬೆಳೆಸಿದ ಜೆಡಿಎಸ್ ಪಕ್ಷವನ್ನು ಮುಳುಗಿಸಿಬಿಡುವ ಹಗಲುಕನಸು ಬೇರೆ ಇದೆ ಎಂದು ಟಾಂಗ್‌ ನೀಡಿದ್ದಾರೆ.

ದೇವೇಗೌಡರು ಅವಕಾಶವಾದಿ ರಾಜಕಾರಣಿ ಎನ್ನುವ ಆ ನಾಲಗೆ, ಜೆಡಿಎಸ್ ಪಕ್ಷ ಬಿಜೆಪಿಯ ಬಿ ಟೀಂ ಎನ್ನುವ ಆ ನಾಲಗೆಯ ಮೇಲೆ ʼಪಕ್ಷನಿಷ್ಠೆʼ ಎನ್ನುವ ಪದ ಎಂದಾದರೂ ಬಂದಿದೆಯಾ? ಅದಕ್ಕೆ ಆ ಪದ ʼಪರಮ ಅಪಥ್ಯʼ ಎನ್ನುವುದು ಇಡೀ ರಾಜ್ಯದ ಜನರಿಗೆ ಗೊತ್ತು ಎಂದು ಟೀಕಿಸಿದ್ದಾರೆ.

ನನಗಿಲ್ಲದಿದ್ದರೆ ಯಾರಿಗೂ ಬೇಡ ಎನ್ನುವ ಸ್ವಾರ್ಥ ಮನೋಭಾವದಿಂದ ಸ್ವಪಕ್ಷವೂ ಇದ್ದ ಮೈತ್ರಿ ಸರಕಾರವನ್ನೇ ʼಸ್ವಾಹಾʼ ಮಾಡಿ ಆಪರೇಷನ್ ಕಮಲದ ಕೆಸರಿನಲ್ಲಿ ವಿಕೃತವಾಗಿ ಹೊರಳಾಡಿದವರು ಯಾರು ಎನ್ನುವುದು ಅವರ ಸ್ವಪಕ್ಷೀಯರಿಗೇ ಚೆನ್ನಾಗಿ ಗೊತ್ತು ಎಂದು ಹೇಳಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img

Don't Miss