ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಚಿವ ಜಮೀರ್ ಅಹ್ಮದ್ ಖಾನ್ ಬಿಜೆಪಿ ಮತ್ತು ಜೆಡಿಎಸ್ ಶಾಸಕರ ವಿರುದ್ಧ ಆಡಿರುವ ಮಾತುಗಳನ್ನು ಸಂಸದ ಜಗದೀಶ್ ಶೆಟ್ಟರ್ ಲೇವಡಿ ಮಾಡಿದ್ದಾರೆ.
ಬಿಜೆಪಿ ಮತ್ತು ಜೆಡಿಎಸ್ ಶಾಸಕರು ತಮ್ಮ ಸಂಪರ್ಕದಲ್ಲಿದ್ದಾರೆ, ಅವರೆಲ್ಲ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಜಮೀರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ಕಾಂಗ್ರೆಸ್ ಪಕ್ಷದಿಂದಲೇ ಕೆಲ ನಾಯಕರು ಹೊರಬೀಳುವ ಸ್ಥಿತಿಯಲ್ಲಿರುವಾಗ ಜಮೀರ್ ಆಡುವ ಮಾತಿಗೆ ಏನಾದರೂ ಬೆಲೆ ಇದೆಯೇ ಎಂದು ನಗುತ್ತಾ ಉತ್ತರಿಸಿದ್ದಾರೆ.