January18, 2026
Sunday, January 18, 2026
spot_img

ನಮ್ಮ ಕ್ಯಾಪ್ಟನ್ ಅಂದ್ರೆ ಸುಮ್ನೇನಾ? ಶತಕದೊಂದಿಗೆ ಭರ್ಜರಿ ದಾಖಲೆ ಬರೆದ ಗಿಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತೀಯ ಯುವ ಬ್ಯಾಟರ್ ಶುಭ್‌ಮನ್ ಗಿಲ್ ಮತ್ತೊಮ್ಮೆ ತನ್ನ ಶ್ರೇಷ್ಠತೆಯನ್ನು ತೋರಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದ ಗಿಲ್, ಈಗ ವೆಸ್ಟ್ ಇಂಡೀಸ್ ವಿರುದ್ಧದ ದ್ವಿತೀಯ ಟೆಸ್ಟ್‌ನಲ್ಲಿ ಶತಕ ಬಾರಿಸಿ ವಿಶಿಷ್ಟ ದಾಖಲೆ ಬರೆದಿದ್ದಾರೆ. ಈ ಶತಕದೊಂದಿಗೆ ಗಿಲ್ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಅತ್ಯಧಿಕ ರನ್ ಗಳಿಸಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಗಿಲ್ 176 ಎಸೆತಗಳಲ್ಲಿ 13 ಬೌಂಡರಿ ಹಾಗೂ 1 ಸಿಕ್ಸ್‌ನೊಂದಿಗೆ ಶತಕ ಪೂರೈಸಿದರು. ಈ ಶತಕದೊಂದಿಗೆ ಅವರು ತಮ್ಮ ಹೆಸರು ಭಾರತೀಯ ಕ್ರಿಕೆಟ್ ಇತಿಹಾಸದ ಸ್ವರ್ಣಾಕ್ಷರಗಳಲ್ಲಿ ಕೆತ್ತಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಈ ದಾಖಲೆಯು ವಿಕೆಟ್‌ಕೀಪರ್ ಬ್ಯಾಟರ್ ರಿಷಭ್ ಪಂತ್ ಅವರ ಹೆಸರಿನಲ್ಲಿತ್ತು. ಪಂತ್ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ 38 ಪಂದ್ಯಗಳಲ್ಲಿನ 67 ಇನಿಂಗ್ಸ್‌ಗಳಲ್ಲಿ 2731 ರನ್ ಗಳಿಸಿದ್ದರು. ಆದರೆ ಗಿಲ್ 39 ಪಂದ್ಯಗಳಲ್ಲಿ 71 ಇನಿಂಗ್ಸ್‌ಗಳಲ್ಲಿ ಆಡಿಕೊಂಡು 10 ಶತಕಗಳೊಂದಿಗೆ ಒಟ್ಟು 2796 ರನ್ ಗಳಿಸಿ ಈ ದಾಖಲೆಯನ್ನು ಮುರಿದಿದ್ದಾರೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಸರಣಿಯ ಒಟ್ಟಾರೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವವರು ಇಂಗ್ಲೆಂಡ್‌ನ ಜೋ ರೂಟ್. ಅವರು 69 ಪಂದ್ಯಗಳಲ್ಲಿ 6080 ರನ್ ಗಳಿಸಿ ಅಪ್ರತಿಮ ಸಾಧನೆ ಮಾಡಿದ್ದಾರೆ.

Must Read

error: Content is protected !!