April 9, 2026
Thursday, April 9, 2026
spot_img

ಇಂತಹ ಸಮಯದಲ್ಲಿ ರಾಜಕೀಯ ಬೇಕಾ?: ಸಿಎಂ ವಿರುದ್ಧ ಆರ್.ಅಶೋಕ್ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಉಂಟಾಗಿರುವ ಗ್ಯಾಸ್ ಕೊರತೆ ವಿಚಾರವನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತೀಯ ಜನತಾ ಪಕ್ಷ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುದ್ಧ ಪರಿಸ್ಥಿತಿ ಎದುರಾಗಿರುವ ಈ ಸಮಯದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಹೇಳಿದರು. ಇಂತಹ ಸಂದರ್ಭಗಳಲ್ಲಿ ಸರ್ಕಾರ ಮತ್ತು ರಾಜಕೀಯ ನಾಯಕರು ಜನರ ಸಮಸ್ಯೆ ಪರಿಹಾರಕ್ಕೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ಇದನ್ನೂ ಓದಿ:

ಗ್ಯಾಸ್ ಕೊರತೆ ಸಮಸ್ಯೆಗೆ ಅಂತಾರಾಷ್ಟ್ರೀಯ ಯುದ್ಧ ಪರಿಸ್ಥಿತಿಯೇ ಕಾರಣವಾಗಿದ್ದು, ಇದನ್ನು ರಾಜಕೀಯ ವಿಷಯವನ್ನಾಗಿ ಮಾಡುವುದು ತಪ್ಪು ಎಂದು ಅಶೋಕ್ ಅಭಿಪ್ರಾಯಪಟ್ಟರು. ರಾಜ್ಯದಲ್ಲಿ ಗ್ಯಾಸ್ ಕಾಳಸಂತೆ ಮಾರಾಟ ನಡೆಯುತ್ತಿರುವ ಬಗ್ಗೆ ಕೂಡ ಅವರು ಆತಂಕ ವ್ಯಕ್ತಪಡಿಸಿದರು. ಅಕ್ರಮ ಮಾರಾಟವನ್ನು ತಡೆಯಲು ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !