ದೃಷ್ಟಿ ಕಳೆದುಕೊಳ್ಳುವ ಸಮಸ್ಯೆಯಿಂದ ಬಳಲುತ್ತಿದ್ದಾರಾ ರಾಘವ್‌ ಚಡ್ಡಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಆಮ್​ಆದ್ಮಿ ಪಕ್ಷದ ಸಂಸದ ದೃಷ್ಟಿ ಕಳೆದುಕೊಳ್ಳುವ ಸ್ಥಿತಿಯಲ್ಲಿದ್ದಾರೆ ಎಂದು ದೆಹಲಿ ಸಚಿವ ಸೌರಭ್​ ಭಾರದ್ವಾಜ್ ಹೇಳಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದಾಗಿನಿಂದ ರಾಘವ್‌ ಚಡ್ಡಾ ಪತ್ತೆಯಿಲ್ಲ ಎಂದು ಪಕ್ಷೇತರರು ಮಾತನಾಡಿದ್ದರು. ರಾಘವ್​  ಕಣ್ಣಿಗೆ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿದ್ದು  ಬ್ರಿಟನ್​ನಲ್ಲಿದ್ದಾರೆ ಎಂದು ಸೌರಭ್‌ ಹೇಳಿದ್ದಾರೆ.

ರಾಘವ್​ ದೃಷ್ಟಿಯಲ್ಲಿ ಸ್ವಲ್ಪ ಸಮಸ್ಯೆ ಇದೆ, ರೆಟಿನಾ ಡಿಟ್ಯಾಚ್‌ಮೆಂಟ್‌ ತುಂಬಾ ಗಂಭೀರ ಕಾಯಿಲೆಯಾಗಿದ್ದು, ಅವರು ದೃಷ್ಟಿಯನ್ನು ಕಳೆದುಕೊಳ್ಳುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ಅದಕ್ಕಾಗಿಯೇ ಅವರು ಚಿಕಿತ್ಸೆಗಾಗಿ ಅಲ್ಲಿಗೆ ಹೋಗಿದ್ದಾರೆ. ಶೀಘ್ರವೇ ಗುಣಮುಖರಾಗಿ ವಾಪಾಸಾಗಲಿ ಎಂದು ಆಶಿಸೋಣ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!