CINEMA| ಪುಷ್ಪ-2 ಚಿತ್ರದಲ್ಲಿ ಲೇಡಿ ಪವರ್ ಸ್ಟಾರ್ ಸಾಯಿ ಪಲ್ಲವಿ, ನಿಜಾನಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಟಾಲಿವುಡ್ ಕ್ರಿಯೇಟಿವ್ ಡೈರೆಕ್ಟರ್ ಸುಕುಮಾರ್ ನಿರ್ದೇಶನದ ಬ್ಲಾಕ್ ಬಸ್ಟರ್ ಸಿನಿಮಾ ‘ಪುಷ್ಪ ದಿ ರೈಸ್’. ಅಲ್ಲು ಅರ್ಜುನ್ ಅಭಿನಯದ ಈ ಚಲನಚಿತ್ರವು ಪ್ಯಾನ್ ಇಂಡಿಯಾ ಹಿಟ್ ಆಗಿದೆ. ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದ್ದು, ಫಹದ್ ಫಾಸಿಲ್, ಸುನೀಲ್, ಅನಸೂಯಾ ಭಾರದ್ವಾಜ್, ರಾವ್ ರಮೇಶ್ ಮುಂತಾದವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಎರಡು ಭಾಗಗಳಲ್ಲಿ ತಯಾರಾಗುತ್ತಿರುವ ಈ ಚಿತ್ರದ ಎರಡನೇ ಭಾಗಕ್ಕಾಗಿ ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ.

ಇದರಿಂದಾಗಿ ಈ ಸಿನಿಮಾದ ಬಗ್ಗೆ ದಿನಕ್ಕೊಂದು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇತ್ತೀಚೆಗೆ ಲೇಡಿ ಪವರ್ ಸ್ಟಾರ್ ಸಾಯಿ ಪಲ್ಲವಿ ಈ ಚಿತ್ರದಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಹಿಂದೆಯೂ ಸಾಯಿ ಪಲ್ಲವಿ ಈ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂಬ ವರದಿಗಳು ಬಂದಿದ್ದವು. ಇದೀಗ ಈ ಸುದ್ದಿ ಮುನ್ನೆಲೆಗೆ ಬಂದಿದೆ. ಪ್ರಮುಖ ಪಾತ್ರಕ್ಕಾಗಿ ಸುಕುಮಾರ್ ಸಾಯಿ ಪಲ್ಲವಿ ಅವರನ್ನು ಸಂಪರ್ಕಿಸಿದ್ದು, ಸಾಯಿ ಪಲ್ಲವಿ ಕೂಡಾ ಪಾತ್ರವನ್ನು ಇಷ್ಟಪಟ್ಟಿದ್ದಾರೆ ಎಂಬ ಗುಸುಗುಸು ಇದೆ.

ಇತ್ತೀಚೆಗಷ್ಟೇ ವೈಜಾಗ್ ಶೆಡ್ಯೂಲ್ ಮುಗಿಸಿರುವ ಈ ಸಿನಿಮಾ ಶೀಘ್ರದಲ್ಲೇ ಮುಂದಿನ ಶೆಡ್ಯೂಲ್ ಶುರುವಾಗಲಿದೆ. ಈ ಶೆಡ್ಯೂಲ್ ನಲ್ಲಿ ಸಾಯಿ ಪಲ್ಲವಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ. ಈ ಕ್ರಮದಲ್ಲಿ #SaiPallavi ಮತ್ತು #PushpaTheRule ಎಂಬ ಹ್ಯಾಶ್‌ಟ್ಯಾಗ್‌ಗಳು ಟ್ವಿಟರ್‌ನಲ್ಲಿ ಟ್ರೆಂಡಿಂಗ್ ಆಗಿವೆ. ಮತ್ತು ಈ ಸುದ್ದಿಯಲ್ಲಿ ಎಷ್ಟು ಸತ್ಯ ಅನ್ನೋದು ಚಿತ್ರತಂಡದಿಂದ ತಿಳಿಯಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!