May 28, 2026
Thursday, May 28, 2026
spot_img

ರಾಜಕೀಯ ಅಖಾಡದಲ್ಲಿ ದಳಪತಿ ಸಕ್ಸಸ್? ನಟ ವಿಜಯ್ ಕುಟುಂಬದಲ್ಲಿ ಹಬ್ಬದ ವಾತಾವರಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡು ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷವು ಗಮನಾರ್ಹ ಸಾಧನೆ ಮಾಡಿದೆ. ರಾಜ್ಯದ ಒಟ್ಟು 234 ವಿಧಾನಸಭಾ ಕ್ಷೇತ್ರಗಳ ಪೈಕಿ ಆರಂಭಿಕ ಟ್ರೆಂಡ್‌ಗಳ ಪ್ರಕಾರ ಟಿವಿಕೆ ಬರೋಬ್ಬರಿ 104 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಅಚ್ಚರಿ ಮೂಡಿಸಿದೆ.

ಪಕ್ಷದ ಈ ಭರ್ಜರಿ ಮುನ್ನಡೆಯಿಂದ ವಿಜಯ್ ಅವರ ಪನೈಯೂರ್ ನಿವಾಸದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ವಿಜಯ್ ಅವರ ಕುಟುಂಬ ಸದಸ್ಯರು ತಮ್ಮ ಪಕ್ಷದ ಅಧಿಕೃತ ಗುರುತಾದ ‘ವಿಸಿಲ್’ ಹೊಡೆಯುವ ಮೂಲಕ ಸಂಭ್ರಮವನ್ನು ಹಂಚಿಕೊಂಡಿದ್ದಾರೆ. ಆರಂಭಿಕ ಹಂತದಲ್ಲಿಯೇ ಪಕ್ಷವು 100ರ ಗಡಿ ದಾಟಿರುವುದು ಅಭಿಮಾನಿಗಳಲ್ಲಿ ಮತ್ತು ಕುಟುಂಬದವರಲ್ಲಿ ಹೊಸ ಉತ್ಸಾಹ ತುಂಬಿದೆ.

ದಶಕಗಳಿಂದ ತಮಿಳುನಾಡು ರಾಜಕಾರಣವನ್ನು ಆಳುತ್ತಿರುವ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳಿಗೆ ಟಿವಿಕೆ ಪ್ರಬಲ ಪೈಪೋಟಿ ನೀಡುತ್ತಿರುವುದು ಈ ಫಲಿತಾಂಶದಿಂದ ಸ್ಪಷ್ಟವಾಗುತ್ತಿದೆ. ರಾಜ್ಯದ ಪ್ರಮುಖ ಕ್ಷೇತ್ರಗಳಲ್ಲಿ ವಿಜಯ್ ಪರವಾಗಿ ಮತದಾರರು ಒಲವು ತೋರಿರುವುದು ದ್ರಾವಿಡ ರಾಜಕಾರಣದಲ್ಲಿ ಹೊಸ ಬದಲಾವಣೆಯ ಮುನ್ಸೂಚನೆ ನೀಡಿದೆ. ಸದ್ಯಕ್ಕೆ ಮುನ್ನಡೆ ಕಾಯ್ದುಕೊಂಡಿರುವ ಟಿವಿಕೆ, ಅಂತಿಮ ಫಲಿತಾಂಶದ ವೇಳೆಗೆ ಕಿಂಗ್ ಮೇಕರ್ ಆಗಿ ಹೊರಹೊಮ್ಮುತ್ತದೆಯೇ ಎಂದು ಕಾದು ನೋಡಬೇಕಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !