ರಾಜ್ಯದಲ್ಲಿರುವುದು ದಿಲ್ಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರಕಾರವೋ?: ಕುಮಾರಸ್ವಾಮಿ ಚಾಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬಿಬಿಎಂಪಿ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲ ಅವರಿಗೆ ಏನು ಕೆಲಸ.? ಇದೀಗ ರಾಜ್ಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಬಿಜೆಪಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಇದೀಗ ಜೆಡಿಎಸ್ ನಾಯಕ, ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಟೀಕಿಸಿದ್ದು, ಕರ್ನಾಟಕ ಸರ್ಕಾರವನ್ನು ದಿಲ್ಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರಕಾರ ಅಂತಾ ಕರೆದಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ ಕುಮಾರಸ್ವಾಮಿ, ‘ರಾಜ್ಯದಲ್ಲಿರುವುದು ಸಿದ್ದರಾಮಯ್ಯನವರ ನೇತೃತ್ವದ ಸರಕಾರವೋ ಅಥವಾ ದಿಲ್ಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರಕಾರವೋ? ಕನ್ನಡಿಗರು ಮತ ಹಾಕಿದ್ದು ಕೈ ಸರಕಾರಕ್ಕಾ? ಅಥವಾ ಕೈಗೊಂಬೆ ಸರಕಾರಕ್ಕಾ? ಪಾಪ.. ಜನರ ವೋಟು ಹಂಗಿನ ಸರಕಾರದ ಪಾಲಾಗಿದೆ. ಸರಕಾರಕ್ಕೆ ತಿಂಗಳು ತುಂಬುವ ಮೊದಲೇ ಅದು ಸಾಬೀತಾಗಿದೆ’ ಎಂದು ಟೀಕಿಸಿದ್ದಾರೆ.

https://twitter.com/hd_kumaraswamy/status/1668610326194184193?cxt=HHwWgoDTlYiQjKguAAAA

‘ಸರಕಾರದ ಅಧಿಕೃತ ಸಭೆಗಳನ್ನು ಹೈಕಮಾಂಡಿನ ನಿಲಯದ ಕಲಾವಿದರೇ ನಡೆಸುವ ಕರ್ಮ ಕರ್ನಾಟಕದ್ದು. ನಾನು ಟ್ಯಾಗ್ ಮಾಡಿರುವ ಫೋಟೋ ಆ ದೈನೇಸಿ ಸ್ಥಿತಿಗೆ ಸಾಕ್ಷಿ. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸುರ್ಜೆವಾಲಾ ಅವರಿಗೆ ಸರಕಾರದ ಸಭೆಗಳನ್ನು ನಡೆಸುವ ಜವಾಬ್ದಾರಿ, ಅವಕಾಶ ಕೊಟ್ಟವರು ಯಾರು?’ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

‘ಸಭೆಯಲ್ಲಿ ಹಿರಿಯ ಸಚಿವರಿದ್ದಾರೆ. ಹಿರಿಯ ಐಎಎಸ್ ಅಧಿಕಾರಿಗಳೂ ಹಾಜರಿದ್ದಾರೆ. ಅಲ್ಲಿಗೆ ಇದು ಅಧಿಕೃತ ಸಭೆಯೇ ಆಯಿತು. ಆದರೆ, ಅಲ್ಲಿ ಸುರ್ಜೆವಾಲಾ ಸೆಂಟರ್ ಸೀಟಿನಲ್ಲಿದ್ದಾರೆ. ಸಚಿವರು ಸೈಡು ಕುರ್ಚಿಗಳ ಪಾಲಾಗಿದ್ದಾರೆ. ಇದೇನು ವಿಚಿತ್ರ? ಮಾನ್ಯ ಮುಖ್ಯಮಂತ್ರಿಗಳೇ ಉತ್ತರಿಸಬೇಕು’ ಎಂದು ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!