ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳ್ಳತನ ಮಾಡಿ ಹಣ ಕೊಡೋಕೆ ಆಗುತ್ತಾ, ಗ್ಯಾರಂಟಿ ಯೋಜನೆಗಳಿಂದಾಗಿ ಟಿಕೆಟ್ ದರ ಹೆಚ್ಚಳ ಆರೋಪ ಸುಳ್ಳು ಎಂದು ಸಚಿವ ಎನ್.ಎಸ್ ಬೋಸರಾಜು ತಿಳಿಸಿದ್ದಾರೆ.
ಕೊಪ್ಪಳ ತಾಲೂಕಿನ ನಾರಾಯಣಪೇಟೆ ಜಾಕವೆಲ್‌ಗೆ ಕೆರೆ ತುಂಬಿಸುವ ಯೋಜನೆಯ ಕಾಮಗಾರಿ ವೀಕ್ಷಣೆ ಮಾಡಿದರು.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸ್ ಪ್ರಯಾಣ ದರ ಏರಿಕೆ ಕುರಿತು ಖಾತ್ರಿ ಯೋಜನೆಗಳಿಂದ ಬಸ್ ಟಿಕೆಟ್ ದರ ಏರಿಕೆ ಮಾಡಲಾಗಿದೆ ಎಂಬ ಮಾತು ಸುಳ್ಳು. ಗ್ಯಾರಂಟಿ ಯೋಜನೆಗಳಿಗೆ ಕೂಡಾ ಜನರ ತೆರಿಗೆ ಹಣವನ್ನೇ ನಾವು ಕೊಡುತ್ತಿದ್ದೇವೆ. ಕಳ್ಳತನ ಮಾಡಿ ಹಣ ಕೊಡೋಕೆ ಆಗುತ್ತಾ? ಡೀಸೆಲ್ ಬೆಲೆ ಹೆಚ್ಚಳವಾಗಿದೆ, ಖರ್ಚು ವೆಚ್ಚ ಹೆಚ್ಚಾಗಿದೆ. ಹೀಗಾಗಿ ಬಸ್ ದರ ಹೆಚ್ಚಳ ಮಾಡುತ್ತಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.