February 20, 2026
Friday, February 20, 2026
spot_img

ಮಾಧ್ಯಮಗಳೇನು ಭಯೋತ್ಪಾದಕರಾ? ಸರ್ಕಾರಕ್ಕೆ ವಿಪಕ್ಷ ನಾಯಕ ‘ಪವರ್ ಫುಲ್’ ಪಂಚ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಮುಕ್ತ ಸಂಚಾರಕ್ಕೆ ನಿರ್ಬಂಧ ವಿಧಿಸಿರುವ ರಾಜ್ಯ ಸರ್ಕಾರದ ಕ್ರಮ ಈಗ ರಾಜಕೀಯ ಸಮರಕ್ಕೆ ನಾಂದಿ ಹಾಡಿದೆ. ಈ ಕುರಿತು ವಿಧಾನಸೌಧದಲ್ಲಿ ಸುದೀರ್ಘ ಪತ್ರಿಕಾಗೋಷ್ಠಿ ನಡೆಸಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

“ಅಂದು ತುರ್ತು ಪರಿಸ್ಥಿತಿ ಸಮಯದಲ್ಲಿ ಮಾಧ್ಯಮಗಳ ಮೇಲೆ ನಿರ್ಬಂಧ ಹೇರಿದ್ದ ಕಾಂಗ್ರೆಸ್ ನಡೆಯನ್ನು ಇದೇ ಸಿದ್ದರಾಮಯ್ಯ ವಿರೋಧಿಸಿದ್ದರು. ಆದರೆ ಇಂದು ಅವರೇ ಮಾಧ್ಯಮಗಳ ಸ್ವಾತಂತ್ರ್ಯ ಹರಣ ಮಾಡುತ್ತಿರುವುದು ಅವರ ದ್ವಂದ್ವ ನೀತಿಯನ್ನು ತೋರಿಸುತ್ತದೆ” ಎಂದು ಅಶೋಕ್ ಟೀಕಿಸಿದರು.

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದವರ ಮೇಲೆ ಕ್ರಮವಿಲ್ಲ, ನಾಯಿಗಳಿಗೆ ಪ್ರವೇಶವಿದೆ, ಆದರೆ ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವಾದ ಮಾಧ್ಯಮಗಳಿಗೆ ನಿರ್ಬಂಧವೇ? ಮಾಧ್ಯಮದವರು ಭಯೋತ್ಪಾದಕರಾ ಎಂದು ಅಶೋಕ್ ಪ್ರಶ್ನಿಸಿದರು.

ಮಾಧ್ಯಮ ಪ್ರತಿನಿಧಿಗಳಿಗೆ ಮುಕ್ತವಾಗಿ ಕೆಲಸ ಮಾಡಲು ಅವಕಾಶ ನೀಡಬೇಕು ಮತ್ತು ಈ ಕೂಡಲೇ ಹೇರಿರುವ ನಿರ್ಬಂಧಗಳನ್ನು ಹಿಂಪಡೆಯಬೇಕು ಎಂದು ಅವರು ಆಗ್ರಹಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !