ವಿಶೇಷ ಅಧಿವೇಶನ ಹಿಂದಿನ ಕಾರಣ ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕೇಂದ್ರ ಸರಕಾರ ಸೆಪ್ಟೆಂಬರ್ 18 ರಿಂದ 22ರ ವರೆಗೆ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆದಿದ್ದು, ಈ ಹಿನ್ನೆಲೆ ರಾಜಕೀಯ ಲೆಕ್ಕಾಚಾರ ಶುರುವಾಗಿದೆ.

ಡಿಸೆಂಬರ್‌ ವೇಳೆಗೆ ಕೆಲ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಹೀಗಾಗಿ ಇದಕ್ಕೂ ಮುನ್ನ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಪರಿಚಯಿಸಬಹುದು ಎಂದು ಮೂಲಗಳು ಗುರುವಾರ ತಿಳಿಸಿವೆ.

‘ಒಂದು ರಾಷ್ಟ್ರ, ಒಂದು ಚುನಾವಣೆ’ ಎನ್ನುವುದು ಲೋಕಸಭೆ ಚುನಾವಣೆ ಮತ್ತು ವಿವಿಧ ರಾಜ್ಯಗಳ ಅಸೆಂಬ್ಲಿಗಳ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಕಲ್ಪನೆಯನ್ನು ಸೂಚಿಸುತ್ತದೆ. ಈಗಾಗಲೇ ಕಾನೂನು ಆಯೋಗವು ಈ ಬಗ್ಗೆ ಅಧ್ಯಯನ ಮಾಡಿದೆ.

ಈ ಮೂಲಕ ಕೇಂದ್ರ ಸರ್ಕಾರ ಕರೆದಿರುವ ವಿಶೇಷ ಅಧಿವೇಶನ ಕುತೂಹಲ ಮೂಡಿಸಿದ್ದು, ಈ ಮಸೂದೆ ಮಂಡಿಸುತ್ತಾರೆ ಇಲ್ಲವೇ ಕಾದುನೋಡಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!