ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಡವರಿಗಾಗಿ ಜಾರಿಗೊಳಿಸಿರುವ ಸಾರ್ವಜನಿಕ ಪಡಿತರ ಯೋಜನೆ ಪ್ರಯೋಜನ ನಿಜವಾಗಿಯೂ ಫಲಾನುಭವಿಗಳಿಗೆ ತಲುಪುತ್ತಿದೆ ಎಂದು ಸುಪ್ರೀಂ ಕೋರ್ಟ್ ಪ್ರಶ್ನೆ ಮಾಡಿದೆ.
ಕೋವಿಡ್ 19 ಪಿಡುಗಿನ ವೇಳೆ ವಲಸೆ ಕಾರ್ಮಿಕರು ಎದುರಿಸಿದ ಸಂಕಷ್ಟಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು ಅರ್ಜಿ ವಿಚಾರಣೆ ನಡೆಸಿದೆ.
ಪಡಿತರ ಚೀಟಿಗಳು ಜನಪ್ರಿಯತೆಗಾಗಿ ರೂಪಿಸಿರುವ ಕಾರ್ಡ್ ಗಳಂತಾಗಿದೆ ಎಂದು ಅಭಿಪ್ರಾಯ ಪಟ್ಟಿರುವ ಸುಪ್ರೀಂ ಕೋರ್ಟ್, ಸಬ್ಸಿಡಿಯ ಲಾಭ ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಬಡವರಿಗಾಗಿ ಇರುವ ಈ ಪ್ರಯೋಜನಗಳು ಅರ್ಹತೆ ಹೊಂದಿರದ ವ್ಯಕ್ತಿಗಳ ಪಾಲಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದೆ.
ಈ ಬಗ್ಗೆ ಸೂಕ್ತ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿ, ವಿಚಾರಣೆಯನ್ನು ಮುಂದೂಡಿದೆ.