ಹೊಸದಿಗಂತ ಡಿಜಿಟಲ್ ಡೆಸ್ಕ್:
ತಂದೆಯಿಂದ ಮಗಳ ಅತ್ಯಾಚಾರ, ಮಗನಿಂದ ತಾಯಿಯ ಮೇಲಿನ ಲೈಂಗಿಕ ದೌರ್ಜನ್ಯ ಇಂತಹ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ ಮತ್ತು ಸಂಬಂಧಗಳು ಅರ್ಥಹೀನವಾಗುತ್ತಿದೆಯೇ? ಎಂಬ ಪ್ರಶ್ನೆ ಉದ್ಭವಿಸುತ್ತದೆ.
ರಾಜಸ್ಥಾನದಲ್ಲಿ ಮಗನೊಬ್ಬ ತನ್ನ ತಾಯಿಯ ಮೇಲೆ ಅತ್ಯಾಚಾರ ಎಸಗಿರುವ ಹೇಯ ಕೃತ್ಯ ಬೆಳಕಿಗೆ ಬಂದಿದೆ. ಕುಡಿದ ಅಮಲಿನಲ್ಲಿ ಮಗ ತನ್ನ 52 ವರ್ಷದ ತಾಯಿ ಮೇಲೆ ಅಟ್ಟಹಾಸ ಮೆರೆದಿದ್ದಾನೆ.
ಸಂತ್ರಸ್ತ ಮಹಿಳೆ ತನ್ನ ಕಿರಿಯ ಮಗ ಮತ್ತು ಮಗಳೊಂದಿಗೆ ದಾಬಿ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆತ ತನ್ನ ತಾಯಿಯ ಮೇಲೆ ಅತ್ಯಾಚಾರ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.