ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುತ್ತಿಗೆಯಲ್ಲಿ ಮೀಸಲಾತಿ ನೀಡಿದ ಬಳಿಕ ಈಗ ವಸತಿ ಯೋಜನೆಯಲ್ಲೂ ಮುಸ್ಲಿಮರ ಮೀಸಲಾತಿ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ ಎಂಬ ಸುದ್ದಿ ಇದೀಗ ಸದ್ದು ಮಾಡ್ತಿದೆ.
ತಮ್ಮ ಸಮುದಾಯಕ್ಕೆ ವಸತಿ ಯೋಜನೆಯಲ್ಲೂ ಮೀಸಲಾತಿಯನ್ನು ಹೆಚ್ಚಿಸುವಂತೆ ವಸತಿ ಇಲಾಖೆ ಸಚಿವ ಜಮೀರ್ ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.
ಇಂದು ನಡೆಯಲಿರುವ ಕ್ಯಾಬಿನೆಟ್ ಸಭೆಯಲ್ಲಿ ಈ ವಿಷಯನ್ನು ಜಮೀರ್ ಪ್ರಸ್ತಾಪಿಸಿದ್ದು, ಈ ಮೀಸಲಾತಿಯನ್ನು 15% ಏರಿಕೆ ಮಾಡುವ ಸಂಬಂಧ ಕ್ಯಾಬಿನೆಟ್ನಲ್ಲಿ ಚರ್ಚೆ ನಡೆಸಿ ಇಂದು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.