Friday, June 2, 2023

Latest Posts

ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ವೇಳೆ ಸಾರಿಗೆ ಬಸ್ ಸಂಚಾರ ಇದೆಯಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಿದ್ದು, ಈ ವೇಳೆ ಪ್ರಯಾಣಿಕರ ದಟ್ಟಣೆಯನ್ನು ಆಧರಿಸಿ, ಸಾರಿಗೆ ಬಸ್ ಸಂಚಾರ ನಡೆಸಲಿವೆ ಎಂಬುದಾಗಿ ಕೆ ಎಸ್ ಆರ್ ಟಿ ಸಿ ತಿಳಿಸಿದೆ.
ಈ ಕುರಿತು ಮಾಹಿತಿ ನೀಡಿರುವ ಕೆ ಎಸ್ ಆರ್ ಟಿ ಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ ಕಳಸ ಅವರು,ರಾಜ್ಯ ಸರ್ಕಾರ ಇಂದಿನಿಂದ ದಿನಾಂಕ 19-01-2022ರವರೆಗೆ ವಾರಾಂತ್ಯ ಹಾಗೂ ನೈಟ್ ಕರ್ಪ್ಯೂ ವಿಸ್ತರಿಸಿದೆ. ಈ ಮಾರ್ಗಸೂಚಿ ಕ್ರಮದ ನಡುವೆಯೂ ಪ್ರಯಾಣಿಕರ ಅನುಕೂಲಕ್ಕಾಗಿ ಸಾರಿಗೆ ಬಸ್ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ರಾತ್ರಿ ಸಾರಿಗೆ ಸೇವೆಗಳನ್ನು ಆನ್ ಲೈನ್ ಬುಕ್ಕಿಂಗ್ ವ್ಯವಸ್ಥೆ ಮೂಲಕ ಕಾಯ್ದಿರಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ಕೇರಳ, ಮಹಾರಾಷ್ಟ್ರ, ಗೋವಾ ರಾಜ್ಯಗಳಿಂದ ಕರ್ನಾಟಕಕ್ಕೆ ಬರೋ ಪ್ರಯಾಣಿಕರಿಗೆ 72 ಗಂಟೆಗಳ ಒಳಗೆ ಮಾಡಿಸಿರುವ ಆರ್ ಟಿ – ಪಿಸಿಆರ್ ನೆಗೆಟಿವ್ ವರದಿ ಕಡ್ಡಾಯವಾಗಿದೆ. ಇದಲ್ಲದೇ ಸಂಪೂರ್ಣ ಲಸಿಕೆ ಪಡೆದಿದ್ದರೂ ಪ್ರಯಾಣಿಸಲು ಅನುಮತಿಸಲಾಗಿದೆ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!