Monday, June 27, 2022

Latest Posts

ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅವಕಾಶ ಇದೆಯೇ?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಕರ್ನಾಟಕದಲ್ಲಿ ಕೊರೋನಾ ವೈರಸ್ ಮೂರನೇ ಅಲೆ ಭೀತಿ ಹಿನ್ನೆಲೆ ಸಾರ್ವಜನಿಕ ಗಣೇಶೋತ್ಸವ ಕುರಿತು ಇಂದು ರಾಜ್ಯ ಸರ್ಕಾರ ನಿರ್ಧರಿಸುವ ಸಾಧ್ಯತೆ ಇದೆ.
ಸಾಮೂಹಿಕ ಗಣೇಶ ಚತುರ್ಥಿ ಆಚರಣೆಗೆ ಸಂಬಂಧಿಸಿದಂತೆ ಈಗಾಗಲೇ ಪರ ವಿರೋಧ ಚರ್ಚೆ ಏರ್ಪಟ್ಟಿದ್ದು, ಸಾಮೂಹಿಕ ಗಣೇಶೋತ್ಸವ ಆಚರಣೆಗೆ ಅವಕಾಶ ಇದೆಯಾ ಅಥವಾ ಇಲ್ಲವಾ ಎನ್ನುವ ಮಾಹಿತಿ ಇಂದು ತಿಳಿಯಲಿದೆ.
ಗಣೇಶೋತ್ಸವ ಆಚರಣೆಗೆ ಕೆಲ ಹೊಸ ಮಾರ್ಗಸೂಚಿ ಬಿಡುಗಡೆ ಮಾಡುವ ಸಾಧ್ಯತೆಯೂ ಹೆಚ್ಚಿದೆ.
ಇಂದು ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ ಕರೆದಿದ್ದು, ತಾಂತ್ರಿಕ ಸಲಹಾ ಸಮಿತಿ ಜೊತೆ ಚರ್ಚಿಸಿ ನಿರ್ಧಾರಕ್ಕೆ ಬರಲಿದ್ದಾರೆ. ಸಭೆಯಲ್ಲಿ ಆರೋಗ್ಯ ಸಚಿವರು,ಬಿಬಿಎಂಪಿ ಆಯುಕ್ತರು ಹಾಗೂ ಪೊಲೀಸ್ ಆಯುಕ್ತರು ಕೂಡ ಭಾಗಿಯಾಗಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss