ಹೊಸದಿಗಂತ ಆನ್ಲೈನ್ ಡೆಸ್ಕ್:
ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆದರೂ ಲಾಕ್ಡೌನ್ ಮಾಡುವ ಪರಿಸ್ಥಿತಿ ಇಲ್ಲ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಒಂದು ವರ್ಷದ ಅವಧಿಯಲ್ಲಿ ನಾವು ಬಹಳಷ್ಟು ಪಾಠ ಕಲಿತಿದ್ದೇವೆ. ಆಗ ಲಸಿಕೆ ಇರಲಿಲ್ಲ. ಈಗ ಲಸಿಕೆ ಕೂಡ ಬಂದಿದೆ. ಚಿಕಿತ್ಸೆ ಇರುವಾಗ ರೋಗಕ್ಕೆ ಹೆದರಬೇಕಾಗಿಲ್ಲ ಎಂದಿದ್ದಾರೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಮತ್ತೆ ಲಾಕ್ಡೌನ್, ಸೀಲ್ಡೌನ್,ನೈಟ್ ಕರ್ಫ್ಯೂ ಜಾರಿ ಮಾಡುವುದಿಲ್ಲ ಎಂದಿದ್ದಾರೆ.