ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರದಲ್ಲಿ ನಂಬರ್ ಪ್ಲೇಟ್ ಇಲ್ಲದ ವಾಹನಗಳ ವಿರುದ್ಧ ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಇಂತಹ ವಾಹನಗಳನ್ನು ರಸ್ತೆ ಮೇಲೆ ಚಲಿಸುವುದೇ ಕಾನೂನು ಉಲ್ಲಂಘನೆ ಎಂದು ಪರಿಗಣಿಸಲಾಗಿದ್ದು, ಸೆಕ್ಷನ್ 420 ಅಡಿಯಲ್ಲಿ ವಂಚನೆ ಪ್ರಕರಣ ದಾಖಲಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ನಂಬರ್ ಪ್ಲೇಟ್ ಇಲ್ಲದೆ ಓಡಾಡುವುದು ಕೇವಲ ನಿಯಮ ಉಲ್ಲಂಘನೆಯಷ್ಟೇ ಅಲ್ಲ, ಕೆಲವರು ಸಂಚಾರಿ ನಿಯಮ ಉಲ್ಲಂಘನೆ ಮರೆಮಾಚಲು ಹಾಗೂ ಅಪರಾಧ ಕೃತ್ಯಗಳಲ್ಲಿ ತೊಡಗಲು ಈ ವಿಧಾನವನ್ನು ಬಳಸುತ್ತಿದ್ದಾರೆ ಎಂಬುದು ಪೊಲೀಸರ ಶಂಕೆ. ಇದರಿಂದಾಗಿ ಪೊಲೀಸರು ಒಂದು ರಾತ್ರಿಯಲ್ಲೇ ನಗರದಲ್ಲಿ ಸಾವಿರಕ್ಕೂ ಹೆಚ್ಚು ವಾಹನಗಳನ್ನು ಸೀಜ್ ಮಾಡಿ ಕಠಿಣ ಸಂದೇಶ ನೀಡಿದ್ದಾರೆ.
ಕೇವಲ ಪಶ್ಚಿಮ ವಿಭಾಗದಲ್ಲೇ 40ಕ್ಕೂ ಹೆಚ್ಚು ವಾಹನ ಸವಾರರ ವಿರುದ್ಧ ವಂಚನೆ ಪ್ರಕರಣ ದಾಖಲಿಸಲಾಗಿದೆ. ನಗರದ ವಿವಿಧ ವಿಭಾಗಗಳಲ್ಲಿ ಶೇಕಡಾರು ವಾಹನ ಸವಾರರ ವಿರುದ್ಧ ಕೇಸ್ ದಾಖಲಿಸಿರುವ ಪೊಲೀಸರು, ಸಮರ್ಪಕ ಕಾರಣ ನೀಡದವರನ್ನು ನೇರವಾಗಿ ಕಾನೂನು ಕ್ರಮಕ್ಕೆ ಒಳಪಡಿಸಿದ್ದಾರೆ.
ಪ್ರಕರಣ ದಾಖಲಾದ ನಂತರ ಚಾರ್ಜ್‌ಶೀಟ್ ಸಲ್ಲಿಸುವ ಪ್ರಕ್ರಿಯೆಯೂ ನಡೆಯುತ್ತಿದ್ದು, ವಾಹನಗಳನ್ನು ವಾಪಸ್ ಪಡೆಯಲು ವಾಹನ ಸವಾರರು ಕೋರ್ಟ್ ಮುಖಾಂತರ ಹೋಗಬೇಕಾಗಿದೆ. ಸಮರ್ಪಕ ಕಾರಣ ನೀಡಿದ ಕೆಲವರು ಮಾತ್ರ ತಮ್ಮ ವಾಹನಗಳನ್ನು ಬಿಡಿಸಿಕೊಂಡು ಹೋಗಲು ಸಾಧ್ಯವಾಗಿದೆ.