ಇದೇನಿದು ಹೊಸ ಟ್ವಿಸ್ಟ್? ಶೆಟ್ಟರ್ ಮನೆಗೆ ಡಿಕೆಶಿ ಭೇಟಿ, ಗೌಪ್ಯ ಚರ್ಚೆ!

ಹೊಸದಿಗಂತ ವರದಿ ಹುಬ್ಬಳ್ಳಿ:

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಇಲ್ಲಿನ ಕೇಶ್ವಾಪುರದ ಮಧುರಾ ಎಸ್ಟೇಟ್’ನಲ್ಲಿರುವ ಕಾಂಗ್ರೆಸ್ ಮುಖಂಡ ಜಗದೀಶ ಶೆಟ್ಟರ್ ನಿವಾಸಕ್ಕೆ ಬುಧವಾರ ಭೇಟಿ ನೀಡಿದರು.

ಶೆಟ್ಟರ್ ಜೊತೆ ಉಪಹಾರ ಸೇವಿಸಿದ ಮುಖಂಡರು ಅರ್ಧ ತಾಸಿಗೂ ಹೆಚ್ಚು ಹೊತ್ತು ಗೌಪ್ಯ ಚರ್ಚೆ ನಡೆಸಿದರು. ಸಚಿವರಾದ ಲಕ್ಷ್ಮಿ ಹೆಬ್ಬಾಳಕರ, ಸತೀಶ ಜಾರಕಿಹೊಳಿ ಮತ್ತು ಶಾಸಕ ಎನ್.ಎಚ್. ಕೋನರಡ್ಡಿ ಇದ್ದರು.

‘ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಪಕ್ಷದಲ್ಲಿ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು’ ಎಂದು ಸ್ಥಳೀಯ ಮುಖಂಡರು ಹಾಗೂ ಬೆಂಬಲಿಗರು ಒತ್ತಡ ಹೇರಿದ್ದಾರೆ. ಶೆಟ್ಟರ್ ಸಹ ಸೂಕ್ತ ಸ್ಥಾನಕ್ಕೆ ಕಾಯುತ್ತೇನೆ ಎಂದು ಇತ್ತೀಚೆಗಷ್ಟೇ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ ಅವರ ಭೇಟಿ ಶೆಟ್ಟರ್ ಬೆಂಬಲಿಗರಲ್ಲಿ ಕುತೂಹಲ ಕೆರಳಿಸಿದೆ.

ಶೆಟ್ಟರ್ ನಿವಾಸದ ಎದುರು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಶೆಟ್ಟರ್ ಅಭಿಮಾನಿಗಳು ಜಮಾಯಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!