ಇದೇನಾ ಬ್ರ್ಯಾಂಡ್ ಬೆಂಗಳೂರು ನಿರ್ಮಾಣ ಮಾಡುವ ಪರಿ? : ಆರ್‌.ಅಶೋಕ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಒಂದೇ ಮಳೆಗೆ ಬೆಂಗಳೂರಿನ ತುಂಬಾ ಬಾಯ್ತೆರೆದಿರುವ ಯಮಸ್ವರೂಪಿ ರಸ್ತೆ ಗುಂಡಿಗಳು ಭ್ರಷ್ಟ ಕಾಂಗ್ರೆಸ್ ಸರ್ಕಾರದ ಅಸಲಿಯತ್ತು ಏನು ಎಂಬುದನ್ನ ಬಟಾ ಬಯಲು ಮಾಡಿದೆ. ಬ್ರ್ಯಾಂಡ್ ಬೆಂಗಳೂರಿನ ಮುಖವಾಡ ಕಳಚಿ ಬಿದ್ದಿದ್ದು, ಕಾಂಗ್ರೆಸ್ ಸರ್ಕಾರದ ಬಂಡವಾಳ ಬೀದಿಗೆ ಬಂದಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಶೇ. 40ರಷ್ಟು ಕಮಿಷನ್ ಸರ್ಕಾರ ಅಂತ ಸುಳ್ಳು, ಅಪಪ್ರಚಾರದ ಮೂಲಕ ಕನ್ನಡಿಗರಿಗೆ ಟೋಪಿ ಹಾಕಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ, ತನ್ನ ಭ್ರಷ್ಟಾಚಾರದ ಹಸಿವು, ದಾಹ ನೀಗಿಸಿಕೊಳ್ಳಲು ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರು ನಗರವನ್ನ ಬಲಿ ಕೊಡುತ್ತಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅವರೇ, ರಾಜಧಾನಿಯ ರಸ್ತೆಗಳು ಕೆರೆಗಳಾಗಿವೆ, ಬಡಾವಣೆಗಳು ಜಲಾವೃತವಾಗಿವೆ. ಬ್ರ್ಯಾಂಡ್ ಬೆಂಗಳೂರು ಹೆಸರಲ್ಲಿ ಲೂಟಿ ಹೊಡೆದು, ಸಿಲಿಕಾನ್ ಸಿಟಿ ಜನರನ್ನು ಮಳೆ ನೀರಲ್ಲಿ ಮುಳುಗಿಸಿ, ಬೆಂಗಳೂರಿನ ಮರ್ಯಾದೆ ಹರಾಜು ಹಾಕಿದ್ದೀರಲ್ಲ, ಇದೇನಾ ತಾವುಗಳು ಬ್ರ್ಯಾಂಡ್ ಬೆಂಗಳೂರು ನಿರ್ಮಾಣ ಮಾಡುವ ಪರಿ? ಎಂದು ಪ್ರಶ್ನಿಸಿದ್ದಾರೆ.

ಒಂದೇ ಒಂದು ರಸ್ತೆಗುಂಡಿ ಮುಚ್ಚಲು ಕೈಲಾಗದಷ್ಟು ಅಸಮರ್ಥ ಅಯೋಗ್ಯ ಕಾಂಗ್ರೆಸ್ ಸರ್ಕಾರದಿಂದ ಬ್ರ್ಯಾಂಡ್‌ ಬೆಂಗಳೂರು ಹೋಗಿ “ಗುಂಡಿ ಬೆಂಗಳೂರು” ಆಗಿ ಪರಿವರ್ತನೆಗೊಂಡಿದೆ. ಅಭಿವೃದ್ಧಿ ಕಾರ್ಯಗಳಿಗೆ ಹಣ ಮೀಸಲಿಡದೆ ಭ್ರಷ್ಟಾಚಾರದ ಕೂಪದಲ್ಲಿ ಮುಳುಗಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರ ರಸ್ತೆಗಳ ಗುಂಡಿ ಮುಚ್ಚಲು ಹೆಣಗಾಡುತ್ತಿದೆ. ಸ್ಕೈ ಡೆಕ್ ನಿರ್ಮಿಸುತ್ತೇನೆ, ಟನಲ್ ರಸ್ತೆ ನಿರ್ಮಿಸುತ್ತೇನೆ ಎಂದು ಅಂಗೈಯಲ್ಲೇ ಅರಮನೆ ತೋರಿಸುತ್ತಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಅಲ್ಲೊಂದು ಇಲ್ಲೊಂದು ಗುಂಡಿ ಮುಚ್ಚಿ ಬಿಟ್ಟಿ ಪ್ರಚಾರಕ್ಕೆ ಪೋಸ್ ಕೊಡುವುದು ಬಿಟ್ಟರೆ ಕಳೆದ 15 ತಿಂಗಳಿಂದ ಸಾಧಿಸಿದ್ದು ದೊಡ್ಡ ಶೂನ್ಯ ಎಂದು ಲೇವಡಿ ಮಾಡಿದ್ದಾರೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!