ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಿಡ್‌ನೈಟ್ ಡಿಸ್ಕಷನ್ಸ್ ಸಕ್ಸಸ್ ಆಗಿ ಇಂದು ಸಿ.ಪಿ. ಯೋಗೇಶ್ವರ್ ಬಿಜೆಪಿ-ಜೆಡಿಎಸ್ ಮೈತ್ರಿ ಬಿಟ್ಟು ಕಾಂಗ್ರೆಸ್ ಕೈ ಹಿಡಿದಿದ್ದಾರೆ.
ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿದ್ದು, ರಾಜಕೀಯ ಅಂದ್ರೆ ಇದೇ ಅಲ್ವಾ? ಇಲ್ಲಿ ಏನು ಬೇಕಾದ್ರೂ ಆಗಬಹುದು, ಇದೇ ರಾಜಕೀಯದ ಬ್ಯೂಟಿ ಎಂದು ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸಿಪಿ ಯೋಗೇಶ್ವರ್ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾವುದೇ ಷರತ್ತು ವಿಧಿಸದೇ ಯೋಗೇಶ್ವರ್ ಪಕ್ಷವನ್ನು ಸೇರಿದ್ದಾರೆ ಎಂದು ತಿಳಿಸಿದರು.
ಇಂದು ಬೆಳಗ್ಗೆ 8 ಗಂಟೆಗೆ ಯೋಗೇಶ್ವರ್ ನಮ್ಮ ಮನೆಗೆ ಬಂದು ನನ್ನನ್ನು ಭೇಟಿ ಮಾಡಿದರು. ಸಾಕಷ್ಟು ವಿಚಾರ ಚರ್ಚೆ ಮಾಡಿದರು. ನಾನು ಕಾಂಗ್ರೆಸ್‌ನಲ್ಲಿ ಇದ್ದವನು ಮುಂದೆ ಕಾಂಗ್ರೆಸ್ ನಲ್ಲಿ ಇರಬೇಕು ಎಂದು ತೀರ್ಮಾನ ಮಾಡಿದ್ದೇನೆ ಎಂದರು. ಈ ವಿಚಾರವನ್ನು ತಕ್ಷಣವೇ ಸಿಎಂ, ಪಕ್ಷದ ವರಿಷ್ಟರ ಗಮನಕ್ಕೆ ತಂದೆ ಎಂದು ಹೇಳಿದರು