ಶಿಕ್ಷಕರಿಗೂ ಸಮವಸ್ತ್ರ ಕಡ್ಡಾಯ? : ಸಚಿವ ಆರಗ ಜ್ಞಾನೇಂದ್ರ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಹಿಜಾಬ್ ವಿವಾದ ಒಂದೆಡೆ ನಡೆಯುತ್ತಿದ್ದು, ಇದರ ನಡುವೆ ಶಿಕ್ಷಕರಿಗೂ ಸಮವಸ್ತ್ರ ಕಡ್ಡಾಯ ಮಾಡುವ ಬಗ್ಗೆ ರಾಜ್ಯ ಸರಕಾರ ಪರಿಶೀಲನೆ ಮಾಡುತ್ತಿದ್ದೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಸಚಿವರು,ಶಿಕ್ಷಕರಿಗೂ ಸಮವಸ್ತ್ರ ಕಡ್ಡಾಯ ಮಾಡುವ ಬಗ್ಗೆ, ಸಮಸ್ಯೆ ಆದ ಬಗ್ಗೆ ನಮ್ಮ ಗಮನಕ್ಕೆ ಬಂದಿದೆ. ಅದನ್ನು ನಾವು ಪರಿಶೀಲನೆ ಮಾಡ್ತಿದ್ದೇವೆ ಎಂದು ತಿಳಿಸಿದರು.
ಇನ್ನು ಇದೇ ವೇಳೆ ನ್ಯಾಯಾಲಯದ ಆದೇಶ ಪಾಲನೆ ಮಾಡುವುದು ನಮ್ಮ ಜವಾಬ್ದಾರಿಯಾಗಿದ್ದು, ಅದರ ಅರಿವು ನಮಗಿದೆ. ಎಲ್ಲರೂ ಆದೇಶಕ್ಕೆ ಬದ್ಧ ಆಗಿರಬೇಕು ಎಂದರು.
ಇನ್ನು ಹಿಜಾಬ್ ವಿವಾದದ ಬಗ್ಗೆ ಸದನದಲ್ಲಿ ಉತ್ತರ ಕೊಡಲಾಗುವುದು. ನಮಗೂ ಸಮವಸ್ತ್ರ ಪಾಲನೆ ವಿಚಾರದಲ್ಲಿ ಸ್ಪಷ್ಟತೆ ತರುವ ಸದುದ್ದೇಶ ಇದೆ. ಇವತ್ತು ಸದನದಲ್ಲಿ ಈ ವಿಚಾರ ಪ್ರಸ್ತಾಪ ಆಗಿದೆ. ಅಗತ್ಯವಿರುವಷ್ಟು ಉತ್ತರ ಕೊಡಲಾಗಿದೆ. ಇನ್ನೂ ಹೆಚ್ಚಿನ ಉತ್ತರ ನಾವು ಕೊಡಲು ಶಕ್ತವಾಗಿದ್ದೇವೆ. ಕೋರ್ಟ್ ಆದೇಶ ಪಾಲನೆ ಮಾಡುವುದು ನಮ್ಮ ಜವಾಬ್ದಾರಿ. ಅದರ ಅರಿವು ನಮಗಿದೆ. ಎಲ್ಲರೂ ಆದೇಶಕ್ಕೆ ಬದ್ಧ ಆಗಿರಬೇಕು ಎಂದು ಜ್ಞಾನೇಂದ್ರ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!