July 14, 2026
Tuesday, July 14, 2026
spot_img

ರಣರಂಗವಾಗುತ್ತಾ ಪಶ್ಚಿಮ ಏಷ್ಯಾ? ಉದ್ವಿಗ್ನತೆ ತಣಿಸಲು ಮೋದಿ-ಮ್ಯಾಕ್ರನ್ ರಣತಂತ್ರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ನಿಯಂತ್ರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸಕ್ರಿಯವಾಗಿದ್ದಾರೆ. ಯುದ್ಧದ ಭೀತಿಯನ್ನು ಶಮನಗೊಳಿಸಲು ವಿಶ್ವದ ಪ್ರಮುಖ ನಾಯಕರೊಂದಿಗೆ ಸಮಾಲೋಚನೆ ನಡೆಸುವ ಮೂಲಕ ಶಾಂತಿ ಸ್ಥಾಪನೆಗೆ ಭಾರತ ಒತ್ತು ನೀಡುತ್ತಿದೆ.

ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ದೂರವಾಣಿ ಕರೆ ನಡೆಸಿದ ಮೋದಿ, ಯುದ್ಧದ ಪರಿಸ್ಥಿತಿಯನ್ನು ತಿಳಿಗೊಳಿಸಲು ಹಾಗೂ ರಾಜತಾಂತ್ರಿಕ ಮಾತುಕತೆಗೆ ಮರಳಲು ಇರುವ ತುರ್ತು ಅಗತ್ಯದ ಬಗ್ಗೆ ಚರ್ಚಿಸಿದರು.

ಈ ಬಗ್ಗೆ ‘X’ ನಲ್ಲಿ ಮಾಹಿತಿ ಹಂಚಿಕೊಂಡ ಮೋದಿ, “ನನ್ನ ಆತ್ಮೀಯ ಸ್ನೇಹಿತ ಮ್ಯಾಕ್ರನ್ ಅವರೊಂದಿಗೆ ಮಾತನಾಡಿದೆ. ಶಾಂತಿ ಮತ್ತು ಸ್ಥಿರತೆಗಾಗಿ ನಾವು ಜತೆಯಾಗಿ ಕೆಲಸ ಮಾಡಲಿದ್ದೇವೆ,” ಎಂದು ತಿಳಿಸಿದ್ದಾರೆ.

ಕೇವಲ ಫ್ರಾನ್ಸ್ ಮಾತ್ರವಲ್ಲದೆ, ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ಮತ್ತು ಒಮಾನ್ ಸುಲ್ತಾನ್ ಹೈತಮ್ ಬಿನ್ ತಾರಿಕ್ ಅಲ್ ಸೈದ್ ಅವರೊಂದಿಗೂ ಮೋದಿ ಸುದೀರ್ಘ ಚರ್ಚೆ ನಡೆಸಿ, ಪ್ರಾದೇಶಿಕ ಸಹಕಾರಕ್ಕೆ ಮನವಿ ಮಾಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !