January19, 2026
Monday, January 19, 2026
spot_img

ಕಾಂಗ್ರೆಸ್ ಗೆ ಯತೀಂದ್ರ ಸಿದ್ದರಾಮಯ್ಯ ಹೈಕಮಾಂಡೇ? ಬಿವೈ ವಿಜಯೇಂದ್ರ ಪ್ರಶ್ನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಯತೀಂದ್ರ ಸಿದ್ದರಾಮಯ್ಯ ಐದು ವರ್ಷ ಕಾಲ ಸಿದ್ದರಾಮಯ್ಯ ಅವರೇ ಸಿಎಂ ಅಂತಾರೆ, ಹಾಗಾದ್ರೆ ರಾಹುಲ್, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಕಾಂಗ್ರೆಸ್ಸಿನ ಹೈಕಮಾಂಡೇ ಅಥವಾ ಯತೀಂದ್ರ ಸಿದ್ದರಾಮಯ್ಯ ಅವರೇ ಹೈಕಮಾಂಡ್ ಯೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿವೈ ವಿಜಯೇಂದ್ರ ಪ್ರಶ್ನಿಸಿದ್ದಾರೆ.

ಈ ಕುರಿತು ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಕುರ್ಚಿಗೆ ಪೈಪೋಟಿ ನಡೆಯುತ್ತಿದ್ದು, ಸದ್ಯದಲ್ಲಿ ಈ ಸಮಸ್ಯೆ ಬಗೆಹರಿಯುವುದಿಲ್ಲ. ಯಾವ ಪುರುಷಾರ್ಥಕ್ಕೆ ಅಧಿವೇಶನ ಮಾಡುತ್ತೀರಿ? ಸಾಧ್ಯವಾದರೆ ಇದನ್ನು ಮುಂದೂಡಿ ಎಂದು ತಿಳಿಸಿದ್ದೆ. ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ನಾಡಿನ ಕೃಷಿಕರು, ರೈತರ, ಬಡವರ, ನೇಕಾರರ ಸಮಸ್ಯೆ ಸೇರಿ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕೆಂದು ಮುಖ್ಯಮಂತ್ರಿಗಳಿಗೆ ಅಧಿವೇಶನ ಆರಂಭಕ್ಕೂ ಮೊದಲೇ ಗಮನ ಸೆಳೆದಿದ್ದೆ ಎಂದು ಹೇಳಿದರು.

ಸಿದ್ದರಾಮಯ್ಯ ಅವರು ಹೈಕಮಾಂಡ್ ಹೇಳಿದಂತೆ ಕೇಳುವುದಾಗಿ ಹೇಳುತ್ತಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಬೆಂಗಳೂರಿಗೆ ಬಂದಾಗ ಒಂದು ರೀತಿ ನಿಸ್ಸಹಾಯಕರಾಗಿ ಮಾತನಾಡಿದ್ದಾಗಿ ಗಮನ ಸೆಳೆದರು. ಇವರ ಗೊಂದಲದಿಂದ ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದುಬಿದ್ದಿದೆ ಎಂದು ಆಕ್ಷೇಪಿಸಿದರು.

ಎರಡು ವರ್ಷಗಳಿಂದ ಒಗ್ಗಟ್ಟಿನ ಮಂತ್ರ ಜಪಿಸುತ್ತಿದ್ದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು, ಒಬ್ಬರಿಗೆ ಒಬ್ಬರು ಕತ್ತಿ ಮಸೆಯುತ್ತಿದ್ದಾರೆ. ಇದರ ಪರಿಣಾಮವಾಗಿ ರಾಜ್ಯದ ಮೇಲೆ ಆಗುತ್ತಿದೆ. ಮುಖ್ಯಮಂತ್ರಿಗಳ ವಿಚಾರ ಕಾಂಗ್ರೆಸ್ಸಿನ ಆಂತರಿಕ ವಿಚಾರವಲ್ಲ, ಅವರು ರಾಜ್ಯಕ್ಕೆ ಮುಖ್ಯಮಂತ್ರಿ ಎಂದು ವಿಶ್ಲೇಷಿಸಿದರು.

Must Read