Thursday, August 18, 2022

Latest Posts

ಇಸಾಮುದ್ರ ಗೊಲ್ಲರಹಟ್ಟಿ ಗ್ರಾಮಕ್ಕೆ ಡಿಹೆಚ್‌ಒ ಡಾ.ರಂಗನಾಥ್ ಭೇಟಿ, ಪರಿಶೀಲನೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಚಿತ್ರದುರ್ಗ:

ಚಿತ್ರದುರ್ಗ ತಾಲ್ಲೂಕಿನ ಭರಮಸಾಗರ ಸಮೀಪದ ಇಸಾಮುದ್ರ ಗ್ರಾಮದ ಲಂಬಾಣಿಹಟ್ಟಿಯಲ್ಲಿ ವಿಷ ಆಹಾರ ಸೇವನೆಯಿಂದ ಮೃತಪಟ್ಟವರ ಮನೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಂಗನಾಥ್ ಆರೋಗ್ಯ ಇಲಾಖೆಯ ತಂಡದೊಂದಿಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ನಂತರ ಮಾತನಾಡಿದ ಅವರು, ಗ್ರಾಮದಲ್ಲಿ ಯಾವುದೇ ಸಾಂಕ್ರಾಮಿಕ ರೋಗವು ಹರಡಿರುವುದಿಲ್ಲ. ವಿಷಾಹಾರ ಸೇವನೆಯಿಂದ ಘಟನೆ ಸಂಭವಿಸಿದ್ದು, ಗ್ರಾಮಸ್ಥರು ಭಯ ಪಡುವ ಅಗತ್ಯವಿಲ್ಲ ಎಂದರು. ಘಟನೆಗೆ ಸಂಬಂಧಿಸಿದಂತೆ ನೀರಿನ ಮಾದರಿ, ಮೃತರು ಸೇವಿಸಿದ ಆಹಾರ ಮಾದರಿ ಸಂಗ್ರಹಿಸಿ ತಪಾಣೆಗೆ ಪ್ರಯೋಗ ಶಾಲೆಗೆ ಕಳುಹಿಸಲಾಯಿತು.
ಈ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್, ರೋಗ ಶಾಸ್ತ್ರಜ್ಞ ಡಾ.ರುದ್ರೇಶ್, ಸೂಕ್ಷ್ಮಜೀವಿ ತಂತ್ರಜ್ಞ ಸುವೀನ್, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಅನಿಲ್ ಮತ್ತು ಲತಾ ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!