Friday, July 1, 2022

Latest Posts

ಇಸಾಮುದ್ರ ಬಾಲಕಿ ಅತ್ಯಾಚಾರ ಪ್ರಕರಣದ ಆರೋಪಿ ಬಂಧನ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಚಿತ್ರದುರ್ಗ:

ಚಿತ್ರದುರ್ಗ ತಾಲ್ಲೂಕಿನ ಇಸಾಮುದ್ರ ಗಾಮದ ಅಪ್ರಾಪ್ತ ವಯಸ್ಸಿನ ಬಾಲಕಿ ಅತ್ಯಾಚಾರ ಹಾಗೂ ಕೊಲೆಗೆ ಸಂಬಂಧಿಸಿದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ತಿಳಿಸಿದರು.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಸಾಮುದ್ರ ಗ್ರಾಮದ ನಾಗರಾಜ ಅಲಿಯಾಸ್ ರಾಜ ಬಂಧಿತ ಆರೋಪಿ. ಈತ ಅತ್ಯಾಚಾರ ಪ್ರಕರಣದಲ್ಲಿ ಬಲಿಯಾದ ಬಾಲಕಿಯ ಪಕ್ಕದ ಮನೆಯವನೇ ಆಗಿದ್ದಾನೆ. ಕಳೆದ ಹಲವು ದಿನಗಳಿಂದ ಬಾಲಕಿಯ ಮೇಲೆ ಕಣ್ಣು ಹಾಕಿದ್ದ ಈತ ಆಕೆಯ ಚಲನವಲನಗಳನ್ನು ಗಮನಿಸುತ್ತಿದ್ದ ಎಂದು ಹೇಳಿದರು.
ಅವಕಾಶಕ್ಕಾಗಿ ಕಾಯುತ್ತಿದ್ದ ಆರೋಪಿ ಶುಕ್ರವಾರ ಮಧ್ಯಾಹ್ನ ಬಾಲಕಿ ಒಂಟಿಯಾಗಿ ಊರಿನಾಚೆಗೆ ಬಹಿರ್ದೆಸೆಗೆ ಹೋಗಿದ್ದನ್ನು ಗಮನಿಸಿದ್ದ. ಬಾಲಕಿಯನ್ನು ಹಿಂಬಾಲಿಸಕೊಂಡು ಹೋಗಿ ಆಕೆಯನ್ನು ಪಕ್ಕದ ಮೆಕ್ಕೆಜೋಳದ ಹೊಲದೊಳಗೆ ಎಳೆದೊಯ್ದಿದ್ದ. ಆಕೆಯ ಮೇಲೆ ಅತ್ಯಾಚಾರ ನಡೆಸಿ ನಂತರ ಕತ್ತು ಹಿಸುಕಿ ಕೊಲೆ ಮಾಡಿದ್ದ ಎಂದು ವಿವರಿಸಿದರು.
ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯ ಪತ್ತೆಗಾಗಾಗಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಲಿಂಗ ನಂದಗಾವಿ ಹಾಗೂ ಡಿವೈಎಸ್‌ಪಿ ಪಾಂಡುರಂಗಪ್ಪ ಅವರ ನೇತೃತ್ವದಲ್ಲಿ ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಆರು ಮಂದಿ ಇನ್‌ಸ್ಟೆಕ್ಟರ್‌ಗಳು, ೧೫ ಪಿಎಸ್‌ಐಗಳು ಹಾಗೂ ೫೦ಕ್ಕೂ ಹೆಚ್ಚು ಸಿಬ್ಬಂದಿಗಳು ಪ್ರಕರಣ ಪತ್ತೆ ಮಾಡುವ ಕಾರ್ಯದಲ್ಲಿ ತೊಡಗಿದ್ದರು.
ಸೂಕ್ತ ಮಾಹಿತಿಯ ಆಧಾರದ ಮೇಲೆ ಮಂಗಳವಾರ ಮಧ್ಯಾಹ್ನ ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯ ಪತ್ತೆ ಕಾರ್ಯದಲ್ಲಿ ಶ್ರಮವಹಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ವಗದವರ ಕಾರ್ಯಕ್ಕೆ ಎಸ್‌ಪಿ ಜಿ.ರಾಧಿಕಾ ಶ್ಲಾಘಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss