Wednesday, March 29, 2023

Latest Posts

ಇಶಾ ಫೌಂಡೇಷನ್‌ ಬಿಗ್ ರಿಲೀಫ್: ಆದಿಯೋಗಿ ಪ್ರತಿಮೆ ವಿರುದ್ಧದ ಪಿಐಎಲ್‌ ಅರ್ಜಿ ವಜಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಶಾ ಫೌಂಡೇಷನ್‌ (Isha Foundation) ನಂದಿ ಬೆಟ್ಟದ ಬಳಿಯ ಆವಲಗುರ್ಕಿ ಗ್ರಾಮದಲ್ಲಿ ಸ್ಥಾಪಿಸಿರುವ ಆದಿಯೋಗಿ ಪ್ರತಿಮೆಯನ್ನು(Adiyogi Statue) ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಸಕ್ತಿ ಅರ್ಜಿಯನ್ನು (PIL) ಹೈಕೋರ್ಟ್‌ ವಜಾಗೊಳಿಸಿದೆ.
ಅರ್ಜಿದಾರರು ತಪ್ಪು ಮಾಹಿತಿ ನೀಡಿ ಪಿಐಎಲ್ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ವಜಾಗೊಳಿಸಿತು.

ಬೇರೆಯವರ ಮೇಲೆ ಬೆರಳು ತೋರಿಸುವ ಮುನ್ನ ನೀವು ಸರಿಯಾಗಿರಬೇಕು. ಉದ್ದೇಶ ಮಾತ್ರವಲ್ಲ, ಮಾರ್ಗವೂ ಶುದ್ಧವಿರಬೇಕು ಎಂದು ಮಹಾತ್ಮ ಗಾಂಧಿ ಹೇಳಿಕೆಯನ್ನು ಉಲ್ಲೇಖಿಸಿದ ಸಿಜೆ ಪ್ರಸನ್ನ ಬಿ ವರಾಳೆ ಅರ್ಜಿ ವಜಾಗೊಳಿಸಿ ಉತ್ತಮ ಹಿನ್ನೆಲೆಯುಳ್ಳವರು ಅರ್ಜಿ ಸಲ್ಲಿಸಬಹುದು ಎಂದು ಸೂಚಿಸಿದರು.

ಏನಿದು ಪ್ರಕರಣ?
ಚಿಕ್ಕಬಳಾಪುರ ಕಸಬಾ ಹೋಬಳಿಯ ಚಂಬಳ್ಳಿಯ ಎಸ್‌. ಕ್ಯಾತಪ್ಪ ಮತ್ತಿತರರು ಕಾನೂನು ಉಲ್ಲಂಘಿಸಿ ಇಶಾ ಫೌಂಡೇಷನ್‌ ಆದಿಯೋಗಿ ಪ್ರತಿಮೆ ಸ್ಥಾಪನೆಯ ಅನುಮತಿ ನೀಡಲಾಗಿದೆ ಎಂದು ಆರೋಪಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದರು.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!