ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹ: ಅಹೋರಾತ್ರಿ ಧರಣಿಗೆ ಕಾಂಗ್ರೆಸಿಗರ ನಿರ್ಧಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಇಂದು ರಾತ್ರಿಯಿಂದಲೇ ಉಭಯ ಸದನಗಳಲ್ಲಿ ಅಹೋರಾತ್ರಿ ಧರಣಿ ನಡೆಸುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈಶ್ವರಪ್ಪ ರಾಜೀನಾಮೆ ನೀಡಬೇಕು. ಅವರು ನಮ್ಮ ಸಂವಿಧಾನಕ್ಕೆ ಅಗೌರವ ತೋರಿದ್ದಾರೆ. ರಾಷ್ಟ್ರಧ್ವಜ ನಮ್ಮ ಸ್ವಾತಂತ್ರ್ಯದ ಸಂಕೇತ. ಇಂಥ ಧ್ವಜದ ಬಗ್ಗೆ ಅನ್ಯ ರೀತಿ ಹೇಳಿಕೆಗಳನ್ನು ನಾವು ಸಹಿಸುವುದಿಲ್ಲ. ಅವರ ಮೇಲೆ ಕೇಸ್ ಹಾಕಬೇಕು ಎಂದಿದ್ದಾರೆ.

ಕೆಂಪುಕೋಟೆಯಲ್ಲಿ ಕೇಸರಿ ಧ್ವಜ ಹಾರಿಸುತ್ತೇವೆ ಎಂದು ಈಶ್ವರಪ್ಪ ನೀಡಿರುವ ಹೇಳಿಕೆಗೆ ಕಾಂಗ್ರೆಸ್ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!