ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹ: ಸದನದಲ್ಲೇ ರಾತ್ರಿ ಕಳೆದ ಕೈ ನಾಯಕರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆಗೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ವಿಧಾನಪರಿಷತ್‌ನಲ್ಲಿ ಅಹೋರಾತ್ರಿ ಹೋರಾಟ ನಡೆಸಿದ್ದಾರೆ.

ಈಶ್ವರಪ್ಪರನ್ನು ಸಂಪುಟದಿಂದ ವಜಾಗೊಳಿಸುವಂತೆ ಒತ್ತಾಯಿಸಿ ವಿಧಾನಸಭೆ, ವಿಧಾನಪರಿಷತ್‌ನಲ್ಲಿ ಅಹೋರಾತ್ರಿ ಹೋರಾಟ ನಡೆಸಿದ್ದು, ಕೈಶಾಸಕರು, ಎಂಎಲ್‌ಸಿಗಳು ಸದಸನದಲ್ಲೇ ರಾತ್ರಿ ಕಳೆದಿದ್ದಾರೆ.

ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್‌ವೈ, ಸಚಿವ ಆರ್ ಅಶೋಕ್ ಕೈ ನಾಯಕರಿಗೆ ಅಹೋರಾತ್ರಿ ಧರಣಿ ಕೈಬಿಡುವಂತೆ ಮನವಿ ಮಾಡಿದ್ದು, ಮನವಿಗೆ ಒಪ್ಪದೇ ಸದನದಲ್ಲೇ ಹಾಸಿಗೆ, ದಿಂಬು ಹಾಸಿ ಮಲಗಿದ್ದಾರೆ.

ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಹೆಚ್.ಕೆ. ಪಾಟೀಲ್, ಈಶ್ವರ ಖಂಡ್ರೆ, ಎನ್. ಎ. ಹ್ಯಾರಿಸ್, ಅಜಯ್ ಸಿಂಗ್, ರಮೇಶ್ ಕುಮಾರ್, ಸೌಮ್ಯಾ ರೆಡ್ಡಿ, ಲಕ್ಷ್ಮೀ ಹೆಬ್ಬಾಳ್ಕರ್, ರೂಪಾ ಶಶಿಧರ್, ಕುಸುಮಾ ಶಿವಳ್ಳಿ ಸೇರಿದಂತೆ ಹಲವು ನಾಯಕರು ಸದನದಲ್ಲೇ ರಾತ್ರಿ ಕಳೆದಿದ್ದಾರೆ. ಈಶ್ವರಪ್ಪ ಅವರು ರಾಜೀನಾಮೆ ನೀಡುವುದು ಬೇಡ, ಆದರೆ ಸಿಎಂ, ಗವರ್ನರ್ ಈಶ್ವರಪ್ಪರನ್ನು ವಜಾ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!