ಈಶ್ವರಪ್ಪ ತಕ್ಷಣ ರಾಜೀನಾಮೆ ಸಲ್ಲಿಸಿ ತನಿಖೆಗೆ ಸಹಕರಿಸಲಿ: ಧೃವನಾರಾಯಣ್ ಒತ್ತಾಯ

ಹೊಸದಿಗಂತ ವರದಿ, ಮೈಸೂರು:
ಉಡುಪಿಯ ಹೋಟೆಲ್‌ನಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಸ್.ಈಶ್ವರಪ್ಪ ಮೇಲೆ ಎಫ್ ಐ ಆರ್ ದಾಖಲಾಗಿದೆ. ಹಾಗಾಗಿ ಕೂಡಲೇ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ಕೆ.ಎಸ್ ಈಶ್ವರಪ್ಪ ರಾಜೀನಾಮೆ ನೀಡಿ ತನಿಖೆಗೆ ಸಹಕಾರ ನೀಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧೃವನಾರಾಯಣ್ ಆಗ್ರಹಿಸಿದರು.
ಬುಧವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ.ಎಸ್.ಈಶ್ವರಪ್ಪ ಸಚಿವ ಸ್ಥಾನದಲ್ಲಿ ಮುಂದುವರೆದರೆ ಪ್ರಕರಣದ ಸಾಕ್ಷಿ ನಾಶ ಮಾಡುವ ಸಾಧ್ಯತೆಯಿದೆ. ಒಮ್ಮೆ ಮಂತ್ರಿ ಮೇಲೆ ಎಫ್ ಐ ಆರ್ ದಾಖಲಾದರೆ, ಅಂತಹವರನ್ನು ಸಚಿವ ಸ್ಥಾನದಲ್ಲಿ ಮುಂದುವರೆಸಿರೋ ನಿದರ್ಶನ ಇಲ್ಲ. ಹಾಗಾಗಿ ಮುಖ್ಯಮಂತ್ರಿಗಳು ಕೂಡಲೇ ಕೆ.ಎಸ್.ಈಶ್ವರಪ್ಪರಿಂದ ರಾಜೀನಾಮೆಯನ್ನು ಪಡೆಯಬೇಕು ಎಂದು ಒತ್ತಾಯಿಸಿದರು. ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಕೇಸ್ ನಲ್ಲಿ ಎಫ್ಐಆರ್ ದಾಖಗುತ್ತಿದ್ದಂತೆ ಗೃಹ ಸಚಿವ ಜಾರ್ಜ್‌ ರಿಂದ ರಾಜೀನಾಮೆ ಪಡೆಯಲಾಗಿತ್ತು. ಪ್ರಕರಣದ ತನಿಖೆ ನಡೆದು ಕ್ಲೀನ್ ಚಿಟ್ ಸಿಕ್ಕ ಬಳಿಕ ಮತ್ತೆ ಅವರು ಮಂತ್ರಿಯಾದರು ಎಂದು ಹೇಳಿದರು.
ಕಂಟ್ರಾಕ್ಟರ್ ಅಸೋಸಿಯೇಷನ್ ಅಧ್ಯಕ್ಷ ಕೆಂಪಣ್ಣ ಅವರು, ಇದು ಶೇ 40ರಷ್ಟು ಕಮಿಷನ್ ಸರ್ಕಾರ ಎಂದು ಆರೋಪ ಮಾಡಿ ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದಿದ್ದರು. ಈಗ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಇದಕ್ಕೊಂದು ಜೀವಂತ ಉದಾಹರಣೆಯಾಗಿದೆ. ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟ ಸರ್ಕಾರ ಅನ್ನೋದು ಸಾಬೀತು ಆಗಿದೆ ಎಂದು ಕಿಡಿಕಾರಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾನು ತಿನ್ನಲ್ಲ, ತಿನ್ನೋರಿಗೂ ಬಿಡಲ್ಲ ಅಂದಿದ್ರು. ಆದರೆ ಈಗ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ನರೇಂದ್ರ ಮೋದಿ ಅವರು ಮೌನಕ್ಕೆ ಶರಣಾಗಿದ್ದಾರೆ. ಇದರ ಅರ್ಥ ಏನು..? ಎಂದು ಪ್ರಶ್ನಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!