ಕಾಂಗ್ರೆಸ್ಸಿಗರಿಗೆ ಈಶ್ವರಪ್ಪ ರಾಜೀನಾಮೆ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ: ಸಿಎಂ ಬೊಮ್ಮಾಯಿ ಕಿಡಿ

ಹೊಸದಿಗಂತ ವರದಿ, ಗದಗ
ಈ ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಗೃಹಮಂತ್ರಿಯಾಗಿದ್ದ ಕೆ.ಜೆ.ಜಾರ್ಜ್‌ ರನ್ನು ಪೊಲೀಸರು ತನಿಖೆ ವೇಳೆಯಲ್ಲಿ ಬಂಧಿಸಿರಲಿಲ್ಲ, ಪ್ರಕರಣ ಸಿಬಿಐಗೆ ವರ್ಗಾವಣೆಗೊಂಡ ನಂತರವೂ ಜಾರ್ಜ್‌ ಬಂಧನವಾಗಿರಲಿಲ್ಲ. ಇದೀಗ ಈಶ್ವರಪ್ಪ ಮೇಲಿನ ಪ್ರಕರಣವೂ ತನಿಖೆ ಹಂತದಲ್ಲಿದೆ. ಈಶ್ವರಪ್ಪ ರಾಜೀನಾಮೆ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ ಮುಖಂಡರಿಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ.ಎಸ್.ಈಶ್ವರಪ್ಪ ಅವರನ್ನು ಬಂಧಿಸುವುದು ತನಿಖಾಧಿಕಾರಿಗಳಿಗೆ ಬಿಟ್ಟದ್ದು, ಮುಂದಿನ ದಿನಗಳಲ್ಲಿ ತನಿಖೆಯಿಂದ ಸತ್ಯ ಹೊರಲಿದೆ. ಅಲ್ಲಿಯವರೆಗೆ ವಿಪಕ್ಷಗಳು ಕಾಯಬೇಕು. ಎರಡು ದಿನಗಳ ಹಿಂದೆಯೇ ಈಶ್ವರಪ್ಪನವರು ರಾಜೀನಾಮೆಗೆ ಮುಂದಾಗಿದ್ದರು. ಪಕ್ಷಕ್ಕೆ ಮುಜುಗರವಾಗಬಾರದೆಂದು ಈಗ ಅವರೇ ರಾಜೀನಾಮೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!