ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಂಗ್ಲಾದೇಶದ ಹಿಂದು ಅಲ್ಪಸಂಖ್ಯಾತರ ಪರ ವಕೀಲರಾಗಿರುವ ಖ್ಯಾತ ಇಸ್ಕಾನ್ ಅರ್ಚಕ ಚಿನ್ಮೋಯ್ ಕೃಷ್ಣ ದಾಸ್ ಬ್ರಹ್ಮಚಾರಿ ಅವರನ್ನು ಢಾಕಾ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ಬಾಂಗ್ಲಾದೇಶ ರಾಜಧಾನಿಯಲ್ಲಿ ಬೃಹತ್ ಹಿಂದೂ ರ್ಯಾಲಿಯನ್ನು ನಡೆಸಿದ್ದಾರೆ, ಹಿಂದೂಗಳ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ ಎಂದು ಧ್ವನಿ ಎತ್ತಿದ್ದಕ್ಕೆ ಅವರನ್ನು ಬಂಧಿಸಲಾಗಿದೆ ಎಂದು ಹೋರಾಟಗಾರರು ಹೇಳಿದ್ದಾರೆ.
ದಾಸ್ ಅವರನ್ನು ಢಾಕಾ ವಿಮಾನ ನಿಲ್ದಾಣದಿಂದ ಕರೆದುಕೊಂಡು ಹೋಗಲಾಗಿದೆ ಎಂದು ಢಾಕಾ ವಿಮಾನ ನಿಲ್ದಾಣ ವ್ಯವಸ್ಥಾಪಕರು ಹೇಳಿದ್ದಾರೆ. ಢಾಕಾ ಪೊಲೀಸರು ತಮ್ಮ ವಾಹನದಲ್ಲಿ ಕರೆದುಕೊಂಡು ಹೋಗಿದ್ದಾರೆ. ಅವರು ಖಾಸಗಿ ವಾಹನವನ್ನು ಬಿಟ್ಟು, ಪೊಲೀಸ್ ವಾಹನದಲ್ಲಿ ಕರೆದುಕೊಂಡು ಹೋಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.