September 30, 2026
Wednesday, September 30, 2026
spot_img

ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ಮುಂದೆ ‘ಇಸ್ಕಾನ್’ ದಾಸೋಹ: ರೋಗಿಗಳಿಗೆ ಸಿಗಲಿದೆ ಪೌಷ್ಟಿಕ ಆಹಾರದ ಬಲ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ಜನಸಾಮಾನ್ಯರ ಆರೋಗ್ಯ ಮತ್ತು ಹಸಿವಿನ ನಿವಾರಣೆಗೆ ಈ ಬಾರಿಯ ಬಜೆಟ್‌ನಲ್ಲಿ ಸರ್ಕಾರವು ವಿಶೇಷ ಒತ್ತು ನೀಡಿದೆ. ಸರ್ಕಾರಿ ಆಸ್ಪತ್ರೆಗಳ ಗುಣಮಟ್ಟ ಹೆಚ್ಚಿಸಲು ಹಾಗೂ ಆಯುರ್ವೇದ ಚಿಕಿತ್ಸೆಗೆ ಮನ್ನಣೆ ನೀಡಲು ಹಸಿರು ನಿಶಾನೆ ತೋರಿಸಲಾಗಿದೆ.

ಇಸ್ಕಾನ್ ಸಂಸ್ಥೆಯ ಸಹಯೋಗದೊಂದಿಗೆ ರೋಗಿಗಳಿಗೆ ಶುಚಿಯಾದ ಮತ್ತು ಪೌಷ್ಟಿಕ ಆಹಾರ ನೀಡುವ ಯಶಸ್ವಿ ಮಾದರಿಯನ್ನು ಈಗ ರಾಜ್ಯದ ಆಯ್ದ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ.

ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳ ಆಯ್ದ ಆಯುಷ್ ಆಸ್ಪತ್ರೆಗಳಲ್ಲಿ ‘ಪಂಚಕರ್ಮ ಘಟಕ’ಗಳನ್ನು ಸ್ಥಾಪಿಸಲಾಗುವುದು. ಇವುಗಳು ಸ್ವಾವಲಂಬಿ ಮಾದರಿಯಲ್ಲಿ ಕಾರ್ಯನಿರ್ವಹಿಸುವಂತೆ ವಿನ್ಯಾಸಗೊಳಿಸಲಾಗಿದೆ.

ಆರೋಗ್ಯ ಇಲಾಖೆಯಲ್ಲಿ ದೀರ್ಘಕಾಲದಿಂದ ಖಾಲಿ ಇರುವ 2,500 ವಿವಿಧ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಿಕೊಳ್ಳುವ ಮೂಲಕ ನಿರುದ್ಯೋಗಿಗಳಿಗೆ ಸಿಹಿ ಸುದ್ದಿ ನೀಡಲಾಗಿದೆ.

Must Read