ಕರ್ನಾಟಕಕ್ಕೆ ಅನುದಾನ ಇಸ್ಕೊಂಡ್‌ ಬರ್ತೀನಿ ವೇಟ್‌..ದೆಹಲಿಗೆ ಹೊರಟ ಸಿಎಂ ಸಿದ್ದು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕರ್ನಾಟಕಕ್ಕೆ ಅನುದಾನ ಇಸ್ಕೊಂಡ್‌ ಬರ್ತೀನಿ ವೇಟ್‌.. ಎಂದು ಸಿಎಂ ಸಿದ್ದರಾಮಯ್ಯ ದೆಹಲಿಗೆ ಹಾರಿದ್ದಾರೆ. ಇಂದಿನಿಂದ ಮೂರು ದಿನಗಳ ಕಾಲ ದೆಹಲಿ ಪ್ರವಾಸದಲ್ಲಿ ಸಿಎಂ ಇರಲಿದ್ದಾರೆ.

ರಾಜ್ಯಕ್ಕೆ ಸಂಬಂಧಿಸಿದ ವಿಚಾರಗಳ ಕುರಿತು ನೂತನ 28 ಸಂಸದರೊಂದಿಗೆ ಸಭೆ ನಡೆಸು ವುದು ಸೇರಿದಂತೆ ಇನ್ನಿತರ ಕಾರ್ಯಗಳಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರದಿಂದ 3 ದಿನಗಳ ಕಾಲ ದೆಹಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ.

ದೆಹಲಿ ಭೇಟಿಯ ಮೊದಲ ದಿನ ರಾಜ್ಯದ ನೂತನ 28 ಸಂಸದರೊಂದಿಗೆ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಎರಡನೇ ದಿನವಾದ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ 3ನೇ ಬಾರಿಗೆ ಪ್ರಧಾನಿಯಾಗಿ ಆಯ್ಕೆಯಾಗಿರುವ ಕುರಿತು ಅಭಿನಂದನೆ ಸಲ್ಲಿಸಲಿದ್ದಾರೆ.

ಈ ವೇಳೆ ಕೇಂದ್ರದಿಂದ ರಾಜ್ಯಕ್ಕೆ ಬೇಕಿರುವ ನೆರವಿನ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಅದಾದ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ವಿವಿಧ ಕೇಂದ್ರ ಸಚಿವರನ್ನು ಭೇಟಿಯಾಗಿ ಯೋಜನೆಗಳ ಕುರಿತು ಮಾತುಕತೆ ನಡೆಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!