ಇಂದು ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಬಂಧನ ಸಾಧ್ಯತೆ !

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಅಧ್ಯಕ್ಷರಾದ ಇಮ್ರಾನ್ ಖಾನ್ ಅವರನ್ನು ಬಂಧಿಸುವಂತೆ ಇಸ್ಲಾಮಾಬಾದ್‌ನ ವಿವಿಧ ನ್ಯಾಯಾಲಯಗಳು ನಿರ್ದೇಶನ ನೀಡಿದ್ದು, ಮಾಜಿ ಪ್ರಧಾನಿಯನ್ನು ಬಂಧಿಸಲು ಇಸ್ಲಾಮಾಬಾದ್ ಪೊಲೀಸರು 24 ಗಂಟೆಗಳಲ್ಲಿ ಜಮಾನ್ ಪಾರ್ಕ್‌ಗೆ ಭೇಟಿ ನೀಡಲಿದ್ದಾರೆ.

ರಾಜಧಾನಿಯ ನ್ಯಾಯಾಲಯಕ್ಕೆ ಸೇರಿದ ಮಹಿಳಾ ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಇಸ್ಲಾಮಾಬಾದ್‌ನ ಸೆಷನ್ಸ್ ನ್ಯಾಯಾಲಯವು ಖಾನ್‌ಗೆ ಜಾಮೀನು ರಹಿತ ಬಂಧನ ವಾರಂಟ್‌ ಪ್ರಕಟಿಸಿದೆ. ಇದಕ್ಕೂ ಹಿಂದಿನ ದಿನ ಸಿವಿಲ್ ನ್ಯಾಯಾಧೀಶ ರಾಣಾ ಮುಜಾಹಿದ್ ರಹೀಮ್ ಅವರು ಮೂರು ಪುಟಗಳ ಕಾಯ್ದಿರಿಸಿದ ತೀರ್ಪನ್ನು ಬಿಡುಗಡೆ ಮಾಡಿದ್ದರು. ಕೋರ್ಟ್‌ಗೆ ಇಮ್ರಾನ್‌ ಖಾನ್‌ ಪದೇಪದೇ ಹಾಜರಾಗದೆ ಇರುವ ಕಾರಣ ಜಾಮೀನುರಹಿತ ವಾರಂಟ್‌ ಅನ್ನು ಅವರು ಹೊರಡಿಸಿದ್ದಾರೆ.

ತೋಶಖಾನಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಧಾನಿ ಪೊಲೀಸರು ಮಾರ್ಚ್ 5 ರಂದು ಲಾಹೋರ್‌ಗೆ ಆಗಮಿಸಿದ್ದರು, ಆದರೆ ಖಾನ್ ಅವರ ಜಮಾನ್ ಪಾರ್ಕ್ ನಿವಾಸದಲ್ಲಿ ಇರಲಿಲ್ಲ ಹೀಗಾಗಿ ಅವರನ್ನು ಬಂಧಿಸಲು ಸಾಧ್ಯವಾಗಿರಲಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!