ಪಾಕ್‌ ನ ಮಸೀದಿಯಲ್ಲಿ ಸ್ಫೋಟ: ಸಾವಿನ ಸಂಖ್ಯೆ 56ಕ್ಕೆ ಏರಿಕೆ, 200ಕ್ಕೂ ಹೆಚ್ಚು ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಾಕಿಸ್ತಾನದ ಪೇಶಾವರದ ಕ್ವಿಸ್ಸಾ ಖಾನ್ವಿ ಬಜಾರ್ ಪ್ರದೇಶದ ಬಳಿ ಇರುವ ಮಸೀದಿಯೊಂದರಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಮೃತರ ಸಂಖ್ಯೆ 56ಕ್ಕೆ ಏರಿಕೆಯಾಗಿದೆ. ಇದರಲ್ಲಿ ಸುಮಾರು 200ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಪ್ರಾರ್ಥನೆ ನಡೆಸಲು ಕೆಲವೇ ಕ್ಷಣಗಳು ಬಾಕಿ ಇರುವಾಗ ಈ ಸ್ಫೋಟ ಸಂಭವಿಸಿದೆ. ಇದರಿಂದ ಮಸೀದಿಯಲ್ಲಿ ಭಾರೀ ಪ್ರಮಾಣದ ಸಾವು ನೋವು ಉಂಟಾಗಿದೆ.
ಇನ್ನು ಮಸೀದಿ ಒಳಗೆ ಇಬ್ಬರು ದಾಳಿಕೋರರು ಪ್ರವೇಶಿಸಲು ಯತ್ನಿಸಿದ್ದು, ಅವರನ್ನು ತಡೆಯಲು ಪ್ರಯತ್ನಿಸಿದ ಪೊಲೀಸರ ಮೇಲೆ ದಾಳಿಕೋರರು ಗುಂಡಿನ ದಾಳಿ ಮಾಡಿದ್ದಾರೆ.
ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!