ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ : ಮೇಯರ್ ಸೇರಿ 5 ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ದಕ್ಷಿಣ ಲೆಬನಾನಿನ ಪಟ್ಟಣವಾದ ನಬಾತಿಯೆಹ್‌ನಲ್ಲಿರುವ ಪುರಸಭೆಯ ಕಟ್ಟಡದ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಐದು ಜನರು ಸಾವಿಗೀಡಾಗಿದ್ದಾರೆ ಎಂದು ಲೆಬನಾನ್‌ನ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.

ದಕ್ಷಿಣ ನಗರದ ಮಾರುಕಟ್ಟೆಯನ್ನು ನಾಶಪಡಿಸಿದ ದಿನಗಳ ನಂತರ ಇಸ್ರೇಲ್ ನಬಾತಿಯೆಹ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ 11 ವೈಮಾನಿಕ ದಾಳಿ ನಡೆಸಿತು ಎಂದು ಲೆಬನಾನಿನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಸ್ರೇಲಿ ಶತ್ರುಗಳ ದಾಳಿ ನಬಾತಿಯೆಹ್ ಪುರಸಭೆ ಮತ್ತು ಪುರಸಭೆಗಳ ಒಕ್ಕೂಟದ ಎರಡು ಕಟ್ಟಡಗಳ ಮೇಲೆ ದಾಳಿ ನಡೆಸಿದ್ದು, ಐವರನ್ನು ಹತ್ಯೆ ಮಾಡಿದೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಈ ದಾಳಿಯಲ್ಲಿ ಮೃತಪಟ್ಟವರಲ್ಲಿ ನಗರದ ಮೇಯರ್ ಕೂಡ ಸೇರಿದ್ದಾರೆ ಎಂದು ಭದ್ರತಾ ಮೂಲಗಳನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ಅವಶೇಷಗಳಡಿ ಸಿಲುಕಿರುವ ಬದುಕುಳಿದವರಿಗಾಗಿ ರಕ್ಷಣಾ ತಂಡಗಳು ಹುಡುಕಾಟ ನಡೆಸುತ್ತಿವೆ. ದಾಳಿಯು ಇಸ್ರೇಲ್-ಲೆಬನಾನ್ ಗಡಿಯಲ್ಲಿ ಉದ್ವಿಗ್ನತೆ ಉಲ್ಬಣಗೊಳ್ಳುತ್ತಿರುವಾಗ ಈ ವೈಮಾನಿಕ ದಾಳಿ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!